Latest

ಮುರುಘಾಶ್ರೀಗಳ ನ್ಯಾಯಾಂಗ ಬಂಧನ ವಿಸ್ತರಣೆ

ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ಲೈಂಗಿಕ ದೌರ್ಜನ್ಯದ ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾಶ್ರೀಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಚಿತ್ರದುರ್ಗ ಜಿಲ್ಲಾ ಕೋರ್ಟ್ ಆದೇಶ ಹೊರಡಿಸಿದೆ.

ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾಶ್ರೀಗಳ ನ್ಯಾಯಾಂಗ ಬಂಧನ ಅವಧಿ ಇಂದು ಅಂತ್ಯವಾಗಿರುವ ಹಿನ್ನೆಲೆಯಲ್ಲಿ ಮುರುಘಾಶ್ರೀಗಳನ್ನು ಚಿತ್ರದುರ್ಗದ ಜಿಲ್ಲಾ 2ನೇ ಸೆಷನ್ಸ್ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ಈ ವೇಳೆ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಸೆ.27ರವರೆಗೆ ನ್ಯಯಾಅಂಗ ಬಂಧನ ವಿಸ್ತರಿಸಿ ಆದೇಶ ಹೊರಡಿಸಿದರು.

Home add -Advt

ಮುರುಘಾಶ್ರೀಗಳಿಗೆ ಇಂದು ಜಾಮೀನು ಸಿಗಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ನ್ಯಾಯಾಲಯ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಆದೇಶ ನೀಡಿದೆ.

ಸರ್ಕಾರದ ವಿರುದ್ಧ ರೈತರ ಆಕ್ರೋಶ; ವಿಧಾನಸೌಧ ಚಲೋಗೆ ನಿರ್ಧಾರ

https://pragati.taskdun.com/latest/vidhanasoudha-chalobelagavifarmerskuraburu-shantakumar/
ಶಾಹಿದ್ ಆಫ್ರಿದಿಗೆ ಜಾಲತಾಣದಲ್ಲಿ ಕುಟುಕಿದ ಅಮಿತ್ ಮಿಶ್ರಾ

 

Related Articles

Back to top button