Latest

ಮುರುಘಾಶ್ರೀಗಳ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮುರುಘಾಶ್ರೀ ಡಾ,ಶಿವಮೂರ್ತಿ ಶರಣರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಮುರುಘಾಶ್ರೀಗಳ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದೆ.

2013ರ ಪ್ರಕರಣದಲ್ಲಿ ಮುರುಘಾಶ್ರೀಗಳ ವಿರುದ್ಧ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. ತಿಪ್ಪಶೆಟ್ಟಿ ಮಠಕ್ಕೆ ಸೇರಿದ ಕೆಂಗೇರಿ ಸೂಲಿಕೆರೆ ಗ್ರಾಮದ 7 ಎಕರೆ 18 ಗುಂಟೆ ಜಾಗವನ್ನು ಮುರುಘಾಶ್ರೀಗಳು ಆನಂದ್ ಕುಮಾರ್ ಎಂಬುವವರಿಗೆ ಅಕ್ರಮವಾಗಿ ಮಾರಾಟ ಮಾಡಿದರು. ಈ ಕುರಿತು ಶ್ರೀಗಳ ವಿರುದ್ಧ ಪಿ.ಎಸ್.ಪ್ರಕಾಶ್ ಎಂಬುವವರು ವಂಚನೆ, ವಿಶ್ವಾದ್ರೋಹ ಪ್ರಕರಣ ದಾಖಲಿಸಿದ್ದರು.

Home add -Advt

ಈ ಪ್ರಕರಣ ಕೋರ್ಟ್ ಮೆಟ್ಟಿಲೇರಿತ್ತು. ವಿಚಾರಣೆಗೆ ಹಾಜರಾಗುವಂತೆ ಮುರುಘಾಶ್ರೀಗಳಿಗೆ ನ್ಯಾಯಾಲಯ ಹಲವುಬಾರಿ ಸಮನ್ಸ್ ಜಾರಿ ಮಾಡಿತ್ತು. ಸಮನ್ಸ್ ಜಾರಿ ಮಾಡಿದರೂ ಕೋರ್ಟ್ ಗೆ ಹಾಜರಾಗದ ಹಿನ್ನೆಲೆಯಲ್ಲಿ ಇದೀಗ ಮುರುಘಾಶ್ರೀಗಳ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದೆ.

ಹಾಸ್ಟೇಲ್ ವಾರ್ಡನ್ ರಶ್ಮಿ ಬಂಧನ

ಮುರುಘಾಶ್ರೀಗಳು ICUಗೆ ಶಿಫ್ಟ್

https://pragati.taskdun.com/latest/murughashreeicu-shiftchitradurga/

Related Articles

Back to top button