Latest

ಮುರುಘಾಶ್ರೀ ಪೀಠತ್ಯಾಗ: ಪ್ರಭಾರ ಪೀಠಾಧ್ಯಕ್ಷರಾಗಿ ಬಸವಪ್ರಭುಶ್ರೀ ನೇಮಕ ನಿರ್ಧಾರ

ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾಶ್ರೀಗಳ ಪೀಠತ್ಯಾಗಕ್ಕೆ ಒತ್ತಡಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೀಠತ್ಯಾಗದ ಸಿದ್ಧತೆ ನಡೆದಿದೆ. ಇನ್ನೊಂದೆಡೆ ಮುರುಘಾ ಮಠಕ್ಕೆ ಪ್ರಭಾರ ಪೀಠಾಧ್ಯಕ್ಷರ ನೇಮಕಕ್ಕೆ ನಿರ್ಧರಿಸಲಾಗಿದೆ.

ದಾವಣಗೆರೆಯ ವಿರಕ್ತಿ ಮಠದ ಬಸವಪ್ರಭುಶ್ರೀ ಅವರನ್ನು ಮುರುಘಾಮಠದ ನೂತನ ಪೀಠಾಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಮಠದ ಭಕ್ತರು, ಆಡಳಿತ ಮಂಡಳಿ ಸದಸ್ಯರು, ಮುಖಂಡರು ಸಭೆ ನಡೆಸಿ ಈ ನಿರ್ಧಾರ ಕೈಗೊಂಡಿದ್ದಾರೆ. ಈ ನಿಟ್ಟಿನಲ್ಲಿ ಕಾನೂನು ಪ್ರಕಾರವಾಗಿ ಕೋರ್ಟ್ ಗೆ ಮನವಿ ಸಲ್ಲಿಸಿ ಅನುಮತಿ ಪಡೆಯುವ ಬಗ್ಗೆ ಚಿಂತನೆ ನಡೆಸಲಾಗಿದೆ.

ಆದರೆ ಮತ್ತೊಂದೆಡೆ ಬಸವಪ್ರಭುಶ್ರೀ ಪ್ರಭಾರ ಪೀಠಾಧ್ಯಕ್ಷರಾಗಿ ನೇಮಕವಾಗಲು ಹಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಬಸವಶ್ರೀ ನೇಮಕ ನ್ಯಾಯ ಸಮ್ಮತವಲ್ಲ. ಮುರುಘಾಶ್ರೀಗಳ ರಕ್ಷಣೆಗಾಗಿ ಈರೀತಿ ಮಾಡಲಾಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಠದಲ್ಲಿಯೇ ದೀಕ್ಷೆ ಪಡೆದ ಕೆಲ ಮಠಾಧೀಶರು, ವೀರಶೈವ ಲಿಂಗಾಯತ ಸಮಾಜದ ಮುಖಂಡರೂ ವಿರೋಧ ವ್ಯಕ್ತಪಡಿಸಿದ್ದಾರೆ.

Bharat Jodo: ರಾಹುಲ್ ಗಾಂಧಿ ಹ್ಯಾಂಡ್ ಶೇಕ್ ಮಾಡಲು ಮುಗಿಬಿದ್ದ ಪೊಲೀಸರು

https://pragati.taskdun.com/latest/rahul-gandhipolicephotos/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button