ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಚಿತ್ರದುರ್ಗದ ಮುರುಘಾಶ್ರೀಗಳ ವಿರುದ್ಧ ಮತೊಂದು ಎಫ್ ಐ ಆರ್ ದಾಖಲಾಗಿರುವ ಬೆನ್ನಲ್ಲೇ ಶ್ರೀಗಳ ಪೀಠತ್ಯಾಗಕ್ಕಾಗಿ ಒತ್ತಡಗಳು ಹೆಚ್ಚುತ್ತಿವೆ.
ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿರುವ ಮುರುಘಾಶ್ರೀಗಳ ವಿರುದ್ಧ ಇದೀಗ ಮತ್ತೊಂದು ಪ್ರಕರಣ ದಾಖಲಾಗಿದೆ. ಈ ನಡುವೆ ಮಠದ ಭಕ್ತರು, ಆಡಳಿತ ಮಂಡಳಿ ನಿಯೋಗ ಸಿಎಂ ಬಸವಾರಾಜ್ ಬೊಮ್ಮಾಯಿ ಭೇಟಿಯಾಗಿ ಶ್ರೀಗಳ ಪೀಠತ್ಯಾಗಕ್ಕೆ ಸೂಚಿಸುವಂತೆ ಒತ್ತಾಯಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಬೊಮ್ಮಾಯಿ, ನಿನ್ನೆ ಮಠದ ಹಲವು ಭಕ್ತರು ಹಾಗೂ ಮಠದ ಒಂದು ನಿಯೋಗ ನನ್ನನ್ನು ಭೇಟಿಯಾಗಿ ಚರ್ಚೆ ನಡೆಸಿದೆ. ಮಠದ ಆಡಳಿತ ವಿಚಾರದಲ್ಲಿ ಆಗುತ್ತಿರುವ ಸಮಸ್ಯೆಗಳ ಬಗ್ಗೆ ತಿಳಿಸಿದೆ. ಮಠದಲ್ಲಿನ ಹಲವಾರು ವಿಚಾರಗಳ ಬಗ್ಗೆ ಸಮಗ್ರವಾಗಿ ಸಮಾಲೋಚನೆ ನಡೆಸಿದೆ ಎಂದರು.
ಮಠದಲ್ಲಿ ಕಾನೂನು ಪ್ರಕಾರ ಈಗಗಾಲೇ ಒಂದು ಟ್ರಸ್ಟ್ ಇದೆ. ಹಾಗಾಗಿ ಕಾನೂನು ಪ್ರಕಾರ ಏನೆಲ್ಲ ಅವಕಾಶವಿದೆ ಆ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು. ಕಾನೂನು ಪ್ರಕಾರವೇ ಮುಂದಿನ ಕ್ರಮ ಜರುಗಿಸಲಾಗುತ್ತದೆ. ಶೀಘ್ರದಲ್ಲಿ ಈ ಬಗ್ಗೆ ತಿಳಿಸಲಾಗುವುದು ಎಂದು ಹೇಳಿದರು.
ಮುರುಘಾ ಮಠದಲ್ಲಿ 4 ವರ್ಷದ ಹೆಣ್ಣು ಮಗು ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
https://pragati.taskdun.com/latest/murughamathachild-foundtwist/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ