Latest

ಮುರುಘಾ ಶರಣರ ವಿರುದ್ಧ ಮೊದಲ ಬಾರಿಗೆ ಗುಡುಗಿದ ಮಾಜಿ ಸಿಎಂ ಯಡಿಯೂರಪ್ಪ

ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ಮುರುಘಾಶ್ರೀಗಳು ಕ್ಷಮಿಸಲಾರದ ಅಪರಾಧ ಮಾಡಿದ್ದಾರೆ. ಇಷ್ಟು ಕೆಳಮಟ್ಟಕ್ಕೆ ಇಳಿತಾರೆ ಅಂದುಕೊಂಡಿರಲಿಲ್ಲ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಚಿತ್ರದುರ್ಗದ ಮುರುಘಾಶ್ರೀಗಳ ವಿರುದ್ಧ ದಾಖಲಾಗಿರುವ 2 ಪೋಕ್ಸೋ ಪ್ರಕರಣದ ವಿಚಾರವಾಗಿ ಮೌನ ಮುರಿದಿರುವ ಮಾಜಿ ಸಿಎಂ ಯಡಿಯೂರಪ್ಪ, ಮುರುಘಾಶ್ರೀಗಳು ಇಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆ ಎಂದುಕೊಂಡಿರಲಿಲ್ಲ. ಇದು ಅಕ್ಷಮ್ಯ ಅಪರಾಧ. ಯಾರೂ ಕ್ಷಮಿಸಲು ಸಾಧ್ಯವಿಲ್ಲ. ಅವರಿಗೆ ತಕ್ಕಶಿಕ್ಷೆಯಾಗಬೇಕು. ಮುರುಘಾಶ್ರೀ ಕೃತ್ಯವನ್ನು ಎಲ್ಲರೂ ಖಂಡಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Home add -Advt

ಇದೇ ವೇಳೆ ಹಿಂದೂ ಧರ್ಮ ಪದದ ಬಗ್ಗೆ ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿ ಹೇಳಿಕೆಯನ್ನು ಖಂಡಿಸಿದ ಯಡಿಯೂರಪ್ಪ, ಹಿಂದೂಗಳಿಗೆ ಅಪಮಾನ ಮಾಡುವ ರೀತಿ ಹೇಳಿಕೆ ಕೊಟ್ಟಿದ್ದು ಖಂಡನೀಯ. ಕಾಂಗ್ರೆಸ್ ನಾಯಕರು ಸತೀಶ್ ಹೇಳಿಕೆಯನ್ನು ಬರಿ ಖಂಡಿಸಿದರೆ ಸಾಲದು. ತಕ್ಷಣ ಸತೀಶ್ ಜನತೆಯ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

ಸತೀಶ್ ಜಾರಕಿಹೊಳಿ ಅರೆಬರೆ ಓದಿದ ವ್ಯಕ್ತಿ; ಆಂತರಿಕ ಕ್ಷೋಭೆಯನ್ನುನುಂಟು ಮಾಡುವುದು ದೇಶದ್ರೋಹದ ಕೆಲಸ; ಸಿಎಂ ಬೊಮ್ಮಾಯಿ ಆಕ್ರೋಶ

https://pragati.taskdun.com/politics/satish-jarakiholistatmentcm-basavaraj-bommaireaction/

Related Articles

Back to top button