Latest

ಮುರುಘಾಶ್ರೀ ಪೊಲೀಸ್ ಕಸ್ಟಡಿಗೆ

ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೀಡಾಗಿದ್ದ ಮುರುಘಾಶ್ರೀಗಳನ್ನು ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ವಹಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಯಾವುದೇ ಮಾಹಿತಿ ನೀಡದೇ ಮುರುಘಾಶ್ರೀಗಳನ್ನು ಆಸ್ಪತ್ರೆಗೆ ದಾಖಲಿಸಿದ್ದ ಕ್ರಮ ಪ್ರಶ್ನಿಸಿದ್ದ ಜಿಲ್ಲಾ ಮ್ಯಾಜಿಸ್ಟ್ರೇಟ್ ಕೋರ್ಟ್ ತಕ್ಷಣ ಆರೋಪಿ ಶ್ರೀಗಳನ್ನು ಕೋರ್ಟ್ ಗೆ ಹಾಜರು ಪಡಿಸುವಂತೆ ನ್ಯಾಯಾಧೀಶರು ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಮುರುಘಾಶ್ರೀಗಳನ್ನು ಕೋರ್ಟ್ ಗೆ  ಹಾಜರು ಪಡಿಸಲಾಗಿತ್ತು.

Home add -Advt

ಇದೇ ವೇಳೆ ಮುರುಘಾಶ್ರೀಗಳನ್ನು ಹೆಚ್ಚಿನ ವಿಚಾರಣೆಗೆ 5 ದಿನ ಕಸ್ಟಡಿಗೆ ನೀಡುವಂತೆ ಪೊಲೀಸರು ಮನವಿ ಮಾಡಿದ್ದರು. ಇದೀಗ ಸೆ.5ವರೆಗೆ ಪೊಲೀಸ್ ಕಸ್ಟಡಿಗೆ ವಹಿಸಿ ಕೋರ್ಟ್ ಆದೇಶ ನೀಡಿದೆ. ಅಲ್ಲದೇ ಆರೋಪಿಯನ್ನು ಹೊರಗಡೆ ಕರೆದುಕೊಂಡು ಹೋಗುವಂತಿಲ್ಲ. ಕಸ್ಟಡಿಯಲ್ಲಿಯೇ ಅಗತ್ಯ ವೈದ್ಯಕೀಯ ನೆರವು ಕಲ್ಪಿಸಬೇಕು ಎಂದು ನ್ಯಾಯಾಲಯ ಸೂಚಿಸಿದೆ

ಮುರುಘಾಶ್ರೀಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸುವಂತೆ ಜಡ್ಜ್ ಸೂಚನೆ

https://pragati.taskdun.com/latest/murughashreeappear-courtimmediatly/

Related Articles

Back to top button