
ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಶರಣರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ನಾಳೆಗೆ ಮುಂದೂಡಿಕೆಯಾಗಿದೆ.
ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಶ್ರೀಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಬಂಧನ ಭೀತಿಯಲ್ಲಿರುವ ಮುರುಘಾಶ್ರೀಗಳು ಚಿತ್ರದುರ್ಗದ ಜಿಲ್ಲಾ ಸೆಷನ್ಸ್ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು.
ಅರ್ಜಿ ಕೈಗೆತ್ತಿಕೊಂಡ ನ್ಯಾಯಾಲಯ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ. ಇನ್ನು ಶ್ರೀಗಳ ವಿರುದ್ಧ ಪರಿಶಿಷ್ಠ ಜಾತಿ ಪಂಗಡ ದೌರ್ಜನ್ಯ ಕಾಯ್ದೆ ಕೂಡ ದಾಖಲಾಗಿರುವುದರಿಂದ ಶ್ರೀಗಳಿಗೆ ನಿರೀಕ್ಷಣಾ ಜಾಮೀನು ಸಿಗುವುದೇ ಇಲ್ಲವೇ ಎಂಬುದು ನಾಳೆ ಗೊತ್ತಾಗಲಿದೆ.
“ಗಣೇಶೋತ್ಸವ ಪೆಂಡಾಲ್ ನಲ್ಲಿ ನಾವೇನು ಅಫ್ಜಲ್ ಗುರು ಫೋಟೊ ಇಡ್ತೀವಾ ?” ಎಂದು ಪ್ರಶ್ನಿಸಿದ ಶಾಸಕ ಅಭಯ ಪಾಟೀಲ