ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌಜನ್ಯ ಆರೋಪದಲ್ಲಿ ಪೋಕ್ಸೋ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ಮುರುಘಾಶ್ರೀ ಡಾ. ಶಿವಮೂರ್ತಿ ಶರಣರನ್ನು ಪೊಲೀಸ್ ಕಸ್ಟಡಿಗೆ ನೀಡುತ್ತಿದ್ದಂತೆ, ಮುರುಘಾಶ್ರೀಗಳ ಶಿಷ್ಯನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗ ಜಿಲ್ಲಾಸ್ಪತ್ರೆ ಎದುರು ನಡೆದಿದೆ.
ಜಿಲ್ಲಾ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಮುರುಘಾಶ್ರೀಗಳನ್ನು ಸೆ.5ರವರೆಗೆ ಪೊಲೀಸ್ ಕಸ್ಟಡಿಗೆ ವಹಿಸಿ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಚಿತ್ರದುರ್ಗ ಪೊಲೀಸರು ಮುರುಘಾಶ್ರೀಗಳನ್ನು ವೈದ್ಯಕೀಯ ತಪಾಸಣೆಗಾಗಿ ಜಿಲ್ಲಾ ಆಸ್ಪತ್ರೆಗೆ ಕರೆ ತಂದಿದ್ದಾರೆ. ಇದೇ ವೇಳೆ ಆಸ್ಪತ್ರೆ ಬಳಿ ಆಗಮಿಸಿದ ಮುರುಘಾಶ್ರೀಗಳ ಬೆಂಬಲಿಗರು, ಶಿಷ್ಯರು ಶ್ರೀಗಳಿಗೆ ಅನ್ಯಾಯವಾಗುತ್ತಿದೆ ಅವರನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ.
ಮುರುಘಾಶ್ರೀಗಳ ಶಿಷ್ಯ ಯೋಗವನ ಬೆಟ್ಟದ ತಿಪ್ಪೇರುದ್ರಸ್ವಾಮಿ ಎಂಬುವವರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣ ಧಾವಿಸಿಬಂದ ಪೊಲೀಸರು ತಿಪ್ಪೇರುದ್ರಸ್ವಾಮಿಯನ್ನು ತಡೆದು ವಶಕ್ಕೆ ಪಡೆದುಕೊಂಡಿದ್ದಾರೆ.
https://pragati.taskdun.com/latest/murughashreepolice-custody4-days/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ