
ಪ್ರಗತಿವಾಹಿನಿ ಸುದ್ದಿ; ಮೈಸೂರು: ಪೊಕ್ಸೋ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮುರುಘಾಶ್ರೀಗಳಿಗೆ ಮತ್ತೊಂದು ಶಾಕ್. ಮುರುಘಾಶ್ರೀ ವಿರುದ್ಧ ಇದೀಗ ಮತ್ತಿಬ್ಬರು ಅಪ್ರಾಪ್ತ ಬಾಲಕಿಯರು ಕಿರುಕುಳ ನೀಡಿರುವ ಆರೋಪ ಮಾಡಿದ್ದು, ಮತ್ತೊಂದು ಎಫ್ ಐ ಆರ್ ದಾಖಲಾಗಿದೆ.
ಮಠದಲ್ಲಿ ಕೆಲಸ ಮಾಡುತ್ತಿದ್ದ ನೌಕರರ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದ್ದು, ತಡ ರಾತ್ರಿ ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಮುರುಘಾಶ್ರೀಗಳ ವಿರುದ್ಧ ದೂರು ದಾಖಲಾಗಿದೆ. ಪೊಲೀಸರು ಎಫ್ ಐ ಆರ್ ದಾಖಲಿಸಿದ್ದು, ಬಳಿಕ ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ಪ್ರಕರಣ ವರ್ಗಾವಣೆ ಮಾಡಿದ್ದಾರೆ.
ಮುರುಘಾ ಮಠದ ಹಾಸ್ಟೇಲ್ ನಲ್ಲಿ ಓದುತ್ತಿದ್ದ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಹಿನ್ನೆಲೆಯಲ್ಲಿ ಪೋಕ್ಸೋ ಕಾಯ್ದೆಯಡಿ ಮುರುಘಾ ಶ್ರೀಗಳನ್ನು ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾರೆ. ಜಾಮೀನಿಗಾಗಿ ಪ್ರಯತ್ನಿಸುತ್ತಿರುವ ಶ್ರೀಗಳಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದ್ದು, ಮತ್ತೆ ಇಬ್ಬರು ಬಾಲಕಿಯರು ಲೈಂಗಿಕ ಕಿರುಕುಳ ಆರೋಪ ಮಾಡಿದ್ದು, ಪ್ರಕರಣ ದಾಖಲಾಗಿದೆ.
ಜಾನುವಾರುಗಳ ಸಾಗಾಣಿಕೆ ಹಾಗೂ ಸಂತೆಗಳ ನಿಷೇಧ
https://pragati.taskdun.com/latest/cattle-transportation-and-shandy-market-banned-due-to-outbreak-of-lumpy-skin-disease/