Latest

ನಾಲ್ವರು ಬಾಲಕಿಯರ ಮೇಲೆ ಲೈಂಗಿಕ ಕಿರುಕುಳ; ಮುರುಘಾಶ್ರೀಗಳ ವಿರುದ್ಧ ಮಠದ ಅಡುಗೆ ಸಹಾಯಕಿಯಿಂದ ದೂರು ದಾಖಲು

ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ಪೊಕ್ಸೋ ಪ್ರಕರಣದಲ್ಲಿ ಬಂಧನಕ್ಕೀಡಾಗಿ ನ್ಯಾಯಾಂಗ ಬಂಧನದಲ್ಲಿರುವ ಮುರುಘಾಶ್ರೀಗಳ ವಿರುದ್ಧ ಪ್ರಕರಣಗಳು ಹೆಚ್ಚುತ್ತಿದ್ದು, ಇದೀಗ ನಾಲ್ವರು ಹೆಣ್ನುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ಮಠದ ಅಡುಗೆ ಸಹಾಯಕಿಯಾಗಿದ್ದ ಮಹಿಳೆಯೇ ದೂರು ದಾಖಲಿಸಿದ್ದಾರೆ.

ತನ್ನ ಇಬ್ಬರು ಹೆಣ್ಣು ಮಕ್ಕಳ ಮೇಲೆ ಮುರುಘಾಶ್ರೀಗಳು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ಅಲ್ಲದೇ ಇನ್ನು ಇಬ್ಬರು ಹೆಣ್ಣು ಮಕ್ಕಳು ಸೇರಿದಂತೆ ಒಟ್ಟು ನಾಲ್ವರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Home add -Advt

ಮಹಿಳೆಯೇ ತನ್ನ ಇಬ್ಬರು ಹೆಣ್ಣು ಮಕ್ಕಳ ಜೊತೆ ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಿದ್ದು, ಎಫ್ ಐ ಆರ್ ದಾಖಲಿಸಿಕೊಂಡಿರುವ ಪೊಲೀಸರು ಪ್ರಕರಣವನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ವರ್ಗಾವಣೆ ಮಾಡಿದ್ದಾರೆ.

ಮುರುಘಾಶ್ರೀಗಳಿಗೆ ಮತ್ತೊಂದು ಸಂಕಷ್ಟ

https://pragati.taskdun.com/latest/murughashreetwo-more-miner-girlssexualy-harrasment-case-filefir/

Related Articles

Back to top button