Kannada NewsKarnataka NewsLatest

*ಖ್ಯಾತ ಸ್ತ್ರೀವೇಷಧಾರಿ ಮೂರೂರು ವಿಷ್ಣುಭಟ್ ಇನ್ನಿಲ್ಲ*

ಪ್ರಗತಿವಾಹಿನಿ ಸುದ್ದಿ; ಸಿದ್ಧಾಪುರ: ಬಡಗು ನಿಟ್ಟಿನ ಪ್ರಸಿದ್ಧ ಸ್ತ್ರೀವೇಷಧಾರಿ ಮೂರೂರು ವಿಷ್ಣುಭಟ್ (65) ಇಂದು ಉತ್ತರ ಕನ್ನಡದ ಸಿದ್ಧಾಪುರದಲ್ಲಿ ನಿಧನ ಹೊಂದಿದರು.

ಗುಂಡುಬಾಳ, ಅಮೃತೇಶ್ವರೀ, ಹಿರೇಮಹಾಲಿಂಗೆಶ್ವರ, ಶಿರಸಿ, ಪೆರ್ಡೂರು, ಮಂದಾರ್ತಿ, ಸಾಲಿಗ್ರಾಮ, ಪೂರ್ಣಚಂದ್ರ ಮೇಳಗಳಲ್ಲಿ ನಾಲ್ಕು ದಶಕಗಳ ಕಲಾ ಸೇವೆ ಗೈದಿದ್ದರು. ದಾಕ್ಷಯಿಣಿ, ಸೀತೆ, ಅಂಬೆ, ಚಂದ್ರಮತಿ, ದಮಯಂತಿ ಮೊದಲಾದ ಪೌರಾಣಿಕ ಪಾತ್ರಗಳನ್ನು ಅನನ್ಯವಾಗಿ ಚಿತ್ರಿಸಿದ್ದರು. ತಮ್ಮ ಭಾವ ಪೂರ್ಣ ಅಭಿನಯ, ಮಾತುಗಾರಿಕೆಯಿಂದ ಅಪಾರ ಸಂಖ್ಯೆಯ ಅಭಿಮಾನಿಗಳ ಪ್ರೀತ್ಯಾದರಕ್ಕೆ ಪಾತ್ರರಾಗಿದ್ದರು.

Related Articles

ಯಕ್ಷಗಾನ ಕಲಾರಂಗ ಪ್ರಶಸ್ತಿ, ಪದ್ಮಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆ ಪ್ರಶಸ್ತಿ ಸೇರಿದಂತೆ ಹಲವು ಪುರಸ್ಕರಗಳಿಗೆ ಭಾಜನರಾಗಿದ್ದರು. ಅವರು ಪತ್ನಿ,ಪುತ್ರನನ್ನು ಅಗಲಿದ್ದಾರೆ.ಅವರ ನಿಧಕ್ಕೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ ರಾವ್ ಕಾರ್ಯದರ್ಶಿ ಮುರಲಿ ಕಡೆಕಾರ್ ಗಾಢ ಸಂತಾಪ ವ್ಯಕ್ತಪಡಿಸಿದ್ದಾರೆ.

Home add -Advt

Related Articles

Back to top button