ಪ್ರಗತಿವಾಹಿನಿ, ಲಂಡನ್; ರಾಣಿ ಎಲಿಜಬೆತ್ ನಿಧನದ ಹಿನ್ನೆಲೆಯಲ್ಲಿ ಇಂಗ್ಲೆಂಡಿನಾದ್ಯಂತ ಶೋಕಾಚರಣೆ ಹಮ್ಮಿಕೊಳ್ಳಲಾಗಿದ್ದು ಇದೇ ಕಾರಣಕ್ಕೆ ಇಂಗ್ಲೆಂಡ್ ಪ್ರವಾಸದಲ್ಲಿರುವ ಭಾರತ ಮಹಿಳಾ ಕ್ರಿಕೆಟ್ ತಂಡಕ್ಕೆ ಡ್ರೆಸ್ಸಿಂಗ್ ರೂಂನಲ್ಲಿ ಮ್ಯೂಸಿಕ್ ಕೇಳುವುದನ್ನು ಅಲ್ಲಿನ ಕ್ರಿಕೆಟ್ ಮಂಡಳಿ ನಿರ್ಬಂಧ ವಿಧಿಸಿದೆ.
ಭಾರತ ಮಹಿಳಾ ಕ್ರಿಕೇಟ್ ತಂಡ ಮೂರು ಟಿ 20 ಪಂದ್ಯಗಳನ್ನು ಆಡಲು ಇಂಗ್ಲೆಂಡಿಗೆ ತೆರಳಿದೆ. ಆದರೆ ರಾಣಿ ಎಲಿಜಬೆತ್ ಅವರ ನಿಧನದ ಹಿನ್ನೆಲೆಯಲ್ಲಿ ಶೋಕಾಚರಣೆ ನಿಮಿತ್ತ ಇಂಗ್ಲೆಂಡಿನಾದ್ಯಂತ ಯಾವುದೇ ಮನೋರಂಜನೆ ಕಾರ್ಯಕ್ರಮಗಳು ನಡೆಯುತ್ತಿಲ್ಲ.
ಹಾಗಾಗಿ ಭಾರತೀಯ ಮಹಿಳಾ ತಂಡಕ್ಕೆ ಡ್ರೆಸ್ಸಿಂಗ್ ರೂಂನಲ್ಲಿ ಸಂಗೀತ ಕೇಳುವುದನ್ನು ಸಹ ನಿರ್ಬಂಧಿಸಲಾಗಿದೆ.
ಇನ್ನು, ಪಂದ್ಯ ನಡೆಯುವ ಕ್ರೀಡಾಂಗಣದಲ್ಲಿ ಹಾರಿಸುವ ಬಿಸಿಸಿಐನ ಧ್ವಜವನ್ನು ಸಹ ಅರ್ಧ ಮಟ್ಟಕ್ಕೆ ಹಾರಿಸಲಾಗುತ್ತದೆ. ಅಲ್ಲದೇ ಪಂದ್ಯದ ವೇಳೆ ಕ್ರೀಡಾಂಗಣದಲ್ಲಿ ಯಾವುದೇ ಬಗೆಯ ವಾಣಿಜ್ಯ ಚಟುವಟಿಕೆಗಳನ್ನು ಸಹ ನಿರ್ಬಂಧಿಸಲಾಗಿದೆ.
ಮೈಸೂರು ದಸರಾ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸಮ್ಮತಿ
https://pragati.taskdun.com/latest/mysore-dasarainaugurationpresident-droupadi-murmu/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ