Latest

*ಮುಸ್ಲಿಮರಿಗೆ ಮೀಸಲಾತಿ: ವಿಚಾರಣೆ ಪೂರ್ಣವಾಗುವವರೆಗೆ ಯಾವುದೇ ನಿರ್ಧಾರ ಇಲ್ಲ; ಸಿಎಂ ಬೊಮ್ಮಾಯಿ*

ಪ್ರಗತಿವಾಹಿನಿ ಸುದ್ದಿ; ಧಾರವಾಡ: ಮುಸ್ಲಿಮರ ಮೀಸಲಾತಿ ಕುರಿತು ಈಗಾಗಲೇ ಸರ್ವೋಚ್ಚ ನ್ಯಾಯಾಲಯದ ಪ್ರಕರಣದ ವಿಚಾರಣೆ ಪೂರ್ಣವಾಗುವವರೆಗೆ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ಈಗಾಗಲೇ ನ್ಯಾಯಾಲಯಕ್ಕೆ ತಿಳಿಸಲಾಗಿದೆ ಎಂದು
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಧಾರವಾಡದಲ್ಲಿ ಮುಸ್ಲಿಮರಿಗೆ ಮೀಸಲಾತಿ ಕುರಿತಂತೆ ಮಾಧ್ಯಮದವರೊಂದಿಗೆ ಮಾತನಾಡಿದರು.

ವಿಚಾರಣೆ ಮುಂದಕ್ಕೆ
ಸರ್ವೋಚ್ಚ ನ್ಯಾಯಾಲಯವು ನಲ್ಲಿ ಮೇ 9 ಕ್ಕೆ ದಿನಾಂಕ ಮುಂದೂಡಿದ್ದು, ಕೋರ್ಟ್‌ ನಿಂದ ಯಾವುದೇ ತಡೆಯಾಜ್ಞೆ ಸಿಕ್ಕಿಲ್ಲ ಎಂದರು.

Home add -Advt

ಕಾಂಗ್ರೆಸ್ ಸುಳ್ಳು ಹೇಳುತ್ತಿದೆ
ಮುಸ್ಲಿಂ ವಿರುದ್ಧವಾಗಿ ಈ ಮೀಸಲಾತಿ ಹಂಚಿಕೆ ಇಲ್ಲ. ಕಾಂಗ್ರೆಸ್ ಸುಳ್ಳು ಹೇಳುತ್ತಿದೆ. ಮುಸ್ಲಿಮರಲ್ಲಿ ಸುಮಾರು 17 ಉಪಜಾತಿಗಾಳಿವೆ. ಅವೆಲ್ಲವೂ ಹಿಂದುಳಿದ ವರ್ಗದಲ್ಲಿಯೇ ಇವೆ. ಇಲ್ಲಿಯೂ ಕಡಿಮೆ ಆದಾಯಕ್ಕೆ ಮೀಸಲಾತಿ ಸಿಗುತ್ತಿತ್ತು. ನಾವು ಈಗ ಮಾಡಿದ ಮೀಸಲಾತಿಯಲ್ಲಿಯೂ ಅದೇ ಸಿಗುತ್ತದೆ. ಹೀಗಾಗಿ ಅನ್ಯಾಯ ಆಗಿಲ್ಲ ಮಾನದಂಡಗಳೂ ಬದಲಾಗಿಲ್ಲ ಎಂದರು.

https://pragati.taskdun.com/karnatakarain-updatealert/

Related Articles

Back to top button