Latest

ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕ ಕಾಲೇಜು ವಿಚಾರ; ಸ್ಪಷ್ಟನೆ ನೀಡಿದ ಸಚಿವೆ ಶಶಿಕಲಾ ಜೊಲ್ಲೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕ ಕಾಲೇಜು ಪ್ರಾರಂಭಿಸುವ ಯಾವುದೇ ಪ್ರಸ್ತಾಪ ಸರಕಾರದ ಮುಂದೆ ಇಲ್ಲ ಎಂದು ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವರಾದ ಶಶಿಕಲಾ ಅ ಜೊಲ್ಲೆ ಸ್ಪಷ್ಟಪಡಿಸಿದ್ದಾರೆ

ಮಾಧ್ಯಮ ಹೇಳಿಕೆಯನ್ನು ನೀಡಿರುವ ಸಚಿವರು, ಮುಸ್ಲಿಂ ಮಹಿಳೆಯರಿಗಾಗಿಯೇ ಪ್ರತ್ಯೇಕ ಕಾಲೇಜು ಪ್ರಾರಂಭಿಸುವ ಬಗ್ಗೆ ಸರಕಾರದ ಮಟ್ಟದಲ್ಲಿ ಯಾವುದೇ ಪ್ರಸ್ತಾವನೆಗಳು ಇಲ್ಲ. ಕಾಲೇಜುಗಳ ಪ್ರಾರಂಭದ ಬಗ್ಗೆ ವಕ್ಫ್‌ ಬೋರ್ಡ್‌ ಅಧ್ಯಕ್ಷರ ಹೇಳಿಕೆಯು ಅವರ ವೈಯಕ್ತಿಕ ಹೇಳಿಕೆಯಾಗಿದೆ. ಈ ವಿಷಯದ ಕುರಿತು ನಾನು ಈಗಾಗಲೇ ವಕ್ಫ್‌ ಬೋರ್ಡ್‌ ಅಧ್ಯಕ್ಷರ ಜೊತೆ ಮಾತನಾಡಿದ್ದು, ಇದರ ಬಗ್ಗೆ ಎದ್ದಿರುವ ಊಹಾಪೋಹಗಳ ಬಗ್ಗೆ ಸ್ಪಷ್ಟನೆ ನೀಡುವಂತೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ಮುಸ್ಲಿಂ ಮಹಿಳೆಯರಿಗಾಗಿ ರಾಜ್ಯದ 10 ಜಿಲ್ಲೆಗಳಲ್ಲಿ ಪ್ರತ್ಯೇಕ ಕಾಲೇಜು ಸ್ಥಾಪನೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ ಎಂಬ ವಿಚಾರ ತೀವ್ರ ಚರ್ಚೆಗೆ ಗುರಿಯಾಗಿತ್ತು. ಇದರ ಬೆನ್ನಲ್ಲೇ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಕೂಡ ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕ ಕಾಲೇಜು ಸ್ಥಾಪನೆ ಕುರಿತ ಯಾವುದೇ ಚರ್ಚೆ ಸರ್ಕಾರದಲ್ಲಿ ನಡೆದಿಲ್ಲ. ಅಂತಹ ಯಾವ ಪ್ರಸ್ತಾಪವೂ ಇಲ್ಲ ಎಂದು ತಿಳಿಸಿದ್ದರು.

ಇದರ ಬೆನ್ನಲ್ಲೇ ಇದೀಗ ಸಚಿವೆ ಶಶಿಕಲಾ ಜೊಲ್ಲೆ ಸರ್ಕಾರದ ಮುಂದೆ ಅಂತಹ ಯಾವುದೇ ಪ್ರಸ್ತಾವನೆ ಇಲ್ಲ. ಈ ವಿಚಾರ ಸತ್ಯಕ್ಕೆ ದೂರವಾದ ಸಂಗತಿ ಎಂದು ತಿಳಿಸಿದ್ದಾರೆ.

ಮುಸ್ಲಿಂ ಹೆಣ್ಣುಮಕ್ಕಳಿಗೆ ಪ್ರತ್ಯೇಕ ಕಾಲೇಜು; ಸಿಎಂ ಸ್ಪಷ್ಟನೆ

https://pragati.taskdun.com/muslim-girlsseparate-collegecm-basavaraj-bommaireaction/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button