Latest

ನ್ಯಾಯಾಧೀಶರು ಸರ್ವಜ್ಞರಲ್ಲ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಲಸಿಕೆ ಕೊರತೆ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ಹೈಕೋರ್ಟ್ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ಪ್ರತಿಕ್ರಿಯಿಸಿದ ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ.ರವಿ, ನ್ಯಾಯಾಧೀಶರೇನು ಸರ್ವಜ್ಞರಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿ.ಟಿ.ರವಿ, ಕೊರೊನಾ ಲಸಿಕೆ ಹಂಚಿಕೆ ವಿಚಾರದಲ್ಲಿ ನಾವು ತಂತ್ರಜ್ಞರ ಸಲಹೆಯಂತೆಯೇ ಕೆಲಸ ಮಾಡುತ್ತಿದ್ದೇವೆ. ನ್ಯಾಯಾಧೀಶರು ಸರ್ವಜ್ಞರಲ್ಲ. ಲಸಿಕೆ ಎಷ್ಟು ಉತ್ಪಾದನೆ ಆಗುತ್ತದೆ. ಯಾವ ಪ್ರಮಾಣದಲ್ಲಿ ಹಂಚಿಕೆ ಮಾಡಬೇಕು ಎಂಬುದನ್ನು ತಾಂತ್ರಿಕ ಸಲಹಾ ಸಮಿತಿ ನೀಡಿದ ಸಲಹೆ ಪ್ರಕಾರ ಕಾರ್ಯನಿರ್ವಹಿಸುವಂತೆ ಸುಪ್ರೀಂ ಕೋರ್ಟ್ ಕೂಡ ಹೇಳಿದೆ ಅದರಂತೆ ನಾವು ಪಾಲಿಸುತ್ತಿದ್ದೇವೆ ಎಂದರು.

ರಾಜ್ಯ ಸರ್ಕಾರ ಲಸಿಕೆ ಅಭಿಯಾನ ಆರಂಭಿಸಿ ಇದೀಗ ಲಸಿಕೆ ಕೊರತೆ ಕಾರಣ ನೀಡುತ್ತಿದೆ. ಲಸಿಕಾ ಕೇಂದ್ರಗಳಲ್ಲಿ ಲಸಿಕೆ ಲಭ್ಯವಿಲ್ಲ ಎನ್ನಲಾಗುತ್ತಿದೆ. ಮೊದಲ ಡೋಸ್ ಪಡೆದವರು, 2ನೇ ಡೋಸ್ ಗಾಗಿ ಪರದಾಡುತ್ತಿದ್ದಾರೆ ಇದೆಂಥಹ ವ್ಯಾಕ್ಸಿನ್ ಅಭಿಯಾನ ಎಂದು ಹೈಕೋರ್ಟ್ ಕಿಡಿಕಾರಿತ್ತು.

ರಾಜ್ಯ ಸರ್ಕಾರದ ಸಾಲ, ಭ್ರಷ್ಟಾಚಾರದ ಬಗ್ಗೆ ಲೆಕ್ಕ ಕೊಟ್ಟ ಸಿದ್ದರಾಮಯ್ಯ

Home add -Advt

Related Articles

Back to top button