Belagavi NewsBelgaum NewsPolitics

*ಮುತಗಾ ಜಾತ್ರೆ: ಶುಭ ಕೋರಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: 300 ವರ್ಷಗಳ ಇತಿಹಾಸ ಹೊಂದಿರುವ ಮುತಗಾ ಗ್ರಾಮದ ಶ್ರೀ ಭಾವಕೇಶ್ವರಿ ದೇವಿ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶುಭ ಕೋರಿದ್ದಾರೆ.


ಈ ಕುರಿತು ಸಚಿವರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದಾರೆ. ದೇವಿಯು ಭಕ್ತರ ಎಲ್ಲ ಇಷ್ಟಾರ್ಥಗಳನ್ನು ಈಡೇರಿಸುತ್ತಾಳೆ ಎನ್ನುವ ನಂಬಿಕೆ ಇದ್ದು, ಬೇಡಿಕೆ ಈಡೇರಿಸಿಕೊಂಡ ಭಕ್ತರು ಜಾತ್ರೆಯ ಸಂದರ್ಭದಲ್ಲಿ ಹರಕೆ ತೀರಿಸುತ್ತಾರೆ. ಜಾತ್ರೆಯಲ್ಲಿ ಸುಮಾರು 3 ಲಕ್ಷಕ್ಕೂ ಅಧಿಕ ಜನ ಸೇರುವುದು ವಿಶೇಷವಾಗಿದೆ. ಜಾತ್ರಾ ಮಹೋತ್ಸವದ ಈ ಶುಭ ಸಂದರ್ಭದಲ್ಲಿ ತಾಯಿ ಭಾವಕೇಶ್ವರಿ ದೇವಿ ಸರ್ವರಿಗೂ ಸನ್ಮಂಗಳವನ್ನುಂಟು ಮಾಡಲಿ, ನಾಡಿನೆಲ್ಲೆಡೆ ಸುಖ, ಶಾಂತಿ, ಸಮೃದ್ಧಿ ನೆಲೆಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button