Belagavi NewsBelgaum NewsKarnataka NewsLatestPolitics

*ಮುತಗಾ ಗ್ರಾಮದಲ್ಲಿ ₹50 ಲಕ್ಷ ವೆಚ್ಚದ ರಸ್ತೆ ಕಾಮಗಾರಿಗಳಿಗೆ ಚಾಲನೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಮುತಗಾ ಗ್ರಾಮದ ಶಿವಾಜಿ ಗಲ್ಲಿ ಹಾಗೂ ಎಕ್ಸ್ಟೆನ್ಶನ್ ಪ್ರದೇಶಗಳಲ್ಲಿ ಸುಮಾರು ₹50 ಲಕ್ಷ ರೂ.ಗಳ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಅಧಿಕೃತ ಚಾಲನೆ ನೀಡಲಾಯಿತು.

Home add -Advt


ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾಮಗಾರಿಗೆ ಚಾಲನೆ ನೀಡಿದರು.


ಕ್ಷೇತ್ರದ ಪ್ರತಿಯೊಂದು ಹಳ್ಳಿಯ ಮೂಲಭೂತ ಸೌಕರ್ಯಗಳನ್ನು ಸುಧಾರಿಸುವುದು ಹಾಗೂ ಸುಸಜ್ಜಿತ ರಸ್ತೆಗಳನ್ನು ನಿರ್ಮಿಸುವ ಮೂಲಕ ಗ್ರಾಮಸ್ಥರ ಸಂಚಾರಕ್ಕೆ ಅನುಕೂಲ ಕಲ್ಪಿಸುವುದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಸಂಕಲ್ಪವಾಗಿದೆ. ಅದೇ ದಿಟ್ಟ ಉದ್ದೇಶದಡಿ ಈ ರಸ್ತೆ ಕಾಮಗಾರಿ ಕೈಗೊಳ್ಳಲಾಗುತ್ತಿದೆ.


ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಸ್ಥಳೀಯ ನಿವಾಸಿಗಳು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related Articles

Back to top button