ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಭಾರತಕ್ಕೆ ರೂಪಾಂತರ ಕೊರೊನಾ ವೈರಸ್ ಕಾಲಿಟ್ಟಿದ್ದು, ಬ್ರಿಟನ್ ನಿಂದ ರಾಜ್ಯಕ್ಕೆ ಆಗಮಿಸಿರುವ ಹಲವರಲ್ಲಿ ಈ ಸೋಂಕು ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಅದರಲ್ಲೂ ಕರ್ನಾಟಕದಲ್ಲಿ ಈ ಹೊಸ ಪ್ರಭೇದದ ಕೊರೊನಾ ಸೋಂಕು ಪತ್ತೆಯಾಗಿದೆ. ಬ್ರಿಟನ್ ನಿಂದ ಬೆಂಗಳೂರಿಗೆ ಆಗಮಿಸಿರುವ ಮೂವರಲ್ಲಿ ರೂಪಾಂತರ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
ಬ್ರಿಟನ್ ನಿಂದ ಭಾರತಕ್ಕೆ ಆಗಮಿಸಿರುವ 6 ಜನರಲ್ಲಿ ಈ ಸೋಂಕು ಪತ್ತೆಯಾಗಿದ್ದು, ಬೆಂಗಳೂರಿನಲ್ಲಿ 3, ಹೈದರಾಬಾದ್ ನಲ್ಲಿ 2 ಹಾಗೂ ಪುಣೆಯಲ್ಲಿ 1 ಕೇಸ್ ಪತ್ತೆಯಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ