ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮೂವರಲ್ಲಿ ರೂಪಾಂತರ ಕೊರೊನಾ ವೈರಸ್ ಪತ್ತೆಯಾಗಿದ್ದು, ಅವರಲ್ಲಿ ಇಬ್ಬರು ವಸಂತಪುರದ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿರುವ ಹಿನ್ನೆಲೆಯಲ್ಲಿ ಇದೀಗ ಇಡೀ ಅಪಾರ್ಟ್ ಮೆಂಟ್ ನ್ನು ಸೀಲ್ ಡೌನ್ ಮಾಡಲಾಗಿದೆ.
ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿರುವ ಇಬ್ಬರಲ್ಲಿ ಬ್ರಿಟನ್ ವೈರಸ್ ಪತ್ತೆಯಾಗಿದ್ದು, ನಿವಾಸಿಗಳು ಬೆರೆಡೆ ಶಿಫ್ಟ್ ಆಗಿ ಕ್ವಾರಂಟೈನ್ ಆಗಲು ನಿರಾಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅಪಾರ್ಟ್ ಮೆಂಟ್ ನಿವಾಸಿಗಳನ್ನು ಅವರವರ ಮನೆಗಳಲ್ಲೇ ಕ್ವಾರಂಟೈನ್ ಮಾಡಲಾಗಿದ್ದು, ಇಡೀ ಅಪಾರ್ಟ್ ಮೆಂಟ್ ನ್ನು ಬಿಬಿಎಂಪಿ ಅಧಿಕಾರಿಗಳು ಸೀಲ್ ಡೌನ್ ಮಾಡಿದ್ದಾರೆ.
ಅಪಾರ್ಟ್ ಮೆಂಟ್ ನ ಗೇಟ್ ಗಳಿಗೆ ಬೀಗ ಜಡಿಯಲಾಗಿದ್ದು, 14 ದಿನಗಳ ಕಾಲ ಯಾರೂ ಮನೆಯಿಂದ ಹೊರ ಬಾರದಂತೆ ಸೂಚಿಸಲಾಗಿದೆ. ಅಲ್ಲದೇ ಅಪಾರ್ಟ್ ಮೆಂಟ್ ಗೆ ಸಂಪರ್ಕ ಕಲ್ಪಿಸುವ ರಸ್ತೆಗಳಿಗೆ ಬ್ಯಾರಿಕೇಡ್ ಗಳನ್ನು ಹಾಕಿ ಬಂದ್ ಮಾಡಲಾಗಿದೆ. ಅಪಾರ್ಟ್ ಮೆಂಟ್ ಸುತ್ತ ಮುತ್ತ ಮುನ್ನೆಚ್ಚರಿಕಾ ಕ್ರಮವಾಗಿ ಕ್ವಾರಂಟೈನ್ ಬಿತ್ತಿ ಪತ್ರಗಳನ್ನು ಅಂಟಿಸಲಾಗಿದೆ. ಒಟ್ಟಾರೆ ಬೆಂಗಳೂರಿನಲ್ಲಿ ಎರಡನೇ ಬಾರಿಗೆ ಸೀಲ್ ಡೌನ್ ಆರಂಭವಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ