Karnataka News

*ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ; ಇಬ್ಬರು ಆರೋಪಿಗಳು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ದರೋಡೆಕೋರರ ಗುಂಪು ಮುತ್ತೂಟ್ ಫೈನಾನ್ಸ್ ಕಚೇರಿಯಲ್ಲಿ ಕಳ್ಳತನಕ್ಕೆ ಯತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಬಳಿಯ ದೇರಳಕಟ್ಟೆಯಲ್ಲಿ ನಡೆದಿದೆ.

ಕೇರಳದಿಂದ ರೈಲಿನಲ್ಲಿ ಬಂದಿದ್ದ ಮೂವರು ಆರೋಪಿಗಳು ಇಂದು ಬೆಳಗಿನ ಜಾವ 3ಗಂಟೆ ಸುಮಾರಿಗೆ ಮುತ್ತೂಟ್ ಫೈನಾನ್ಸ್ ಕಚೇರಿಗೆ ನುಗ್ಗಿ ಡ್ರಿಲ್ಲಿಂಗ್ ಮೆಷಿನ್ ಮೂಲಕ ಬಾಗಿಲು ಮುರಿಯಲು ಯತ್ನಿಸಿದ್ದಾರೆ. ಈ ವೇಳೆ ಸೈರನ್ ಮೊಳಗಿದೆ. ತಕ್ಷಣ ಸ್ಥಳೀಯರು ಹಾಗೂ ಗಸ್ತು ಪೊಲೀಸರು ಎಚ್ಚೆತ್ತುಗ್ಕೊಂಡು ಘಟನ ಸ್ಥಳಕ್ಕೆ ದೌಡಾಯಿಸಿದ್ದಾರೆ.

ಸೈರನ್ ಮೊಳಗುತ್ತಿದಂತೆ ಆರೋಪಿಗಳು ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಓರ್ವ ಆರೋಪಿ ಪರಾರಿಯಾಗಿದ್ದಾನೆ.

ಬಂಧಿತರನ್ನು ಕೇರಳ ಮೂಲದ ಮುರಳಿ ಹಾಗೂ ಇರ್ಷಾದ್ ಎಂದು ಗುರುತಿಸಲಾಗಿದೆ. ಈ ಇಬ್ಬರೂ ಬಂಧಿತರು ಕೇರಳದಲ್ಲಿ ವಿಜಯಾಬ್ಯಾಂಕ್ ದರೋಡೆಯಲ್ಲಿಯೂ ಭಾಗೊಯಾಗಿದ್ದರಂದು ತಿಳಿದಿಬಂದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button