Kannada NewsKarnataka NewsLatest

*ಮುತ್ತಪ್ಪ ರೈ ಮಗ ರಿಕ್ಕಿ ರೈ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಬೆಂಗಳೂರಿನ 8ನೇ ಎಸಿಎಂಎಂ ಕೋರ್ಟ್ ಆದೇಶದ ಮೇರೆಗೆ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ.

Home add -Advt

ಕಳೆದ ಎರಡು ತಿಂಗಳ ಹಿಂದೆ ರಿಚ್ಮಂಡ್ ರಸ್ತೆಯ ಕೇಜ್ ಹೋಟೆಲ್ ನಲ್ಲಿ ನಡೆದಿದ್ದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದೆ. ರಿಕ್ಕಿ ರೈ ಹಾಗೂ ಸಹಚರರು, ಶ್ರೀನಿವಾಸ್ ನಾಯ್ಡು ಎಂಬುವವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಅಲ್ಲದೇ ರಿಕ್ಕಿ ರೈ ವಕೀಲ ನಾರಾಯಣ ಸ್ವಾಮಿ ಎಂಬುವವರಿಂದಲೂ ಶ್ರೀನಿವಾಸ್ ನಾಯ್ಡುಗೆ ಬೆದರಿಕೆ ಹಾಕಲಾಗಿದೆ. ಪೊಲೀಸ್ ಠಾಣೆಗೆ ಹೋದರೆ ಕೊಲೆ ಮಡುವುದಾಗಿ ಬೆದರಿಸಿದ್ದರು ಎಂದು ಆರೋಪಿಸಿ ಶ್ರೀನಿವಾಸ್ ನಾಯ್ಡು ದೂರು ನೀಡಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಎಫ್ ಐ ಆರ್ ದಾಖಲಿಸಲು ಸೂಚಿಸಿದ ಹಿನ್ನೆಲೆಯಲ್ಲಿ ರಿಕ್ಕಿ ರೈ ವಿರುದ್ಧ ಪ್ರಕರಣ ದಾಖಲಾಗಿದೆ.


Related Articles

Back to top button