
ಪ್ರಗತಿವಾಹಿನಿ ಸುದ್ದಿ: ಮಟನ್ ಊಟ ಮಾಡಿದ್ದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕಲ್ಲೂರು ಗ್ರಾಮದಲ್ಲಿ ನಡೆದಿದೆ.
ಭೀಮಣ್ಣ(60), ಈರಮ್ಮ (54), ಮಲ್ಲೇಶ್ (19) ಹಾಗೂ ಪಾರ್ವತಿ (17) ಮೃತರು. ಮಲ್ಲಮ್ಮ ಎಂಬುವವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಟನ್ ಅಡುಗೆಯಲ್ಲಿ ಹಲ್ಲಿ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ