ಕಳೆದ ಬಾರಿಗಿಂತಲೂ ಅಧಿಕ ಮತಗಳಿಂದ ನನ್ನ ಗೆಲುವು ನಿಶ್ಚಿತ – ಅಣ್ಣಾಸಾಹೇಬ ಜೊಲ್ಲೆ
ಪ್ರಗತಿವಾಹಿನಿ ಸುದ್ದಿ, ನಿಪ್ಪಾಣಿ: ಲೋಕಸಭೆ ಚುನಾವಣೆಗೆ ಬಿಜೆಪಿ ಪಕ್ಷ ಚಿಕ್ಕೋಡಿ ಕ್ಷೇತ್ರದಿಂದ ಅಭ್ಯರ್ಥಿಯನ್ನಾಗಿ ಎರಡನೇ ಬಾರಿಗೆ ನನ್ನನ್ನು ಆಯ್ಕೆ ಮಾಡಿತ್ತು. ಕಳೆದ ಐವತ್ತು ದಿನಗಳಿಂದ ಪ್ರಚಾರ ಕಾರ್ಯದಲ್ಲಿ ತೊಡಗಿದ್ದೆವು. ಈ ಬಾರಿಯು ಕೂಡ ಕ್ಷೇತ್ರದಲ್ಲಿ ಉತ್ತಮ ಪ್ರತಿಕ್ರಿಯೆ ದೊರಕಿದೆ. ಕಳದೆ ಬಾರಿಗಿಂತಲೂ ಅಧಿಕ ಮತಗಳಿಂದ ಗೆಲ್ಲುವ ವಿಶ್ವಾಸ ಸಂಸದ ಅಣ್ಣಾಸಾಹೇಬ ಜೊಲ್ಲೆ ಅವರು ವ್ಯಕ್ತಪಡಿಸಿದರು.
ನಗರದಲ್ಲಿಯ ಪಕ್ಷದ ಕಛೇರಿಯಲ್ಲಿ ಭಾನುವಾರ ಜರುಗಿದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಮತ್ತೆ ಮೋದಿಯವರನ್ನು ಪ್ರಧಾನಿ ಮಾಡುವ ಸಂಕಲ್ಪ ಈ ಭಾಗದ ಮತದಾರರು ಹೊಂದಿದ್ದಾರೆ. ಹೀಗಾಗಿ ಈ ಬಾರಿಯೂ ಚಿಕ್ಕೋಡಿಯಲ್ಲಿ ಬಿಜೆಪಿ ಗೆಲುವು ಶತಸಿದ್ದ. ಮತದಾರರಲ್ಲಿ ಮತದಾನದ ದಿನಾಂಕದವರೆಗೂ ಇದೇ ಉತ್ಸಾಹವಿರಲಿ. ಕಾಂಗ್ರೆಸ್ ಶಾಸಕರು ಹೊಂದಿರುವ ಕ್ಷೇತ್ರಗಳಲ್ಲಿ ಬಿಜೆಪಿಗೆ ಅತೀ ಹೆಚ್ಚು ಲೀಡ್ ಸಿಗಲಿದೆ. ಕಾಂಗ್ರೆಸ್‌ನ ಐದು ಗ್ಯಾರಂಟಿಗಳಿಗಿಂತಲೂ ಪ್ರಧಾನಿ ಮೋದಿಯವರ ಅಭಿವೃದ್ದಿ ಕಾರ್ಯಗಳು ಬಿಜೆಪಿಗೆ ವರದಾನವಾಗಲಿದೆ.
ಬಂಬಲವಾಡ ಗ್ರಾಮದ ಬಿಜೆಪಿ ಪರ ಅಪಪ್ರಚಾರ ಮಾಡಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ಇಷ್ಟು ಕೀಳುಮಟ್ಟದ ರಾಜಕೀಯ ಮಾಡಬಾರದು. ಗೋಕಾಕ ರಾಜಕಾರಣ ಚಿಕ್ಕೋಡಿಯಲ್ಲಿ ನಡೆಯಲ್ಲ ಎಂದರು.
ಸುದ್ದಿಗೋಷ್ಠಿಯಲ್ಲಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಮಾತನಾಡಿ, ಕಾಂಗ್ರೆಸ್ ನಾಯಕರಲ್ಲಿ ಏಕತೆ ಕಾಣ್ತಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ನೇತೃತ್ವ ಹಾಗೂ ಸಮಗ್ರ ದೇಶದ ಚಿಂತನೆ ಕುರಿತಂತೆ ವಿಫಲವಾಗಿದೆ. ಇದು ಸಮಗ್ರ ದೇಶದ ಚುನಾವಣೆಯಾಗಿದೆ. ಆದರೆ ವಿರೋಧಿ ಪಕ್ಷಕ್ಕೆ ನೇತೃತ್ವವಿಲ್ಲದ ಚುನಾವಣೆ ಇದಾಗಿದೆ. ಇಂಡಿ ಒಕ್ಕೂಟದವರು ಪ್ರಧಾನಮಂತ್ರಿ ಅಭ್ಯರ್ಥಿ ಯಾರು ಅಂತಾ ಘೋಷನೆ ಮಾಡಿಲ್ಲ. ನೂರು ವರ್ಷಗಳ ಇತಿಹಾಸವಿರುವ ಕಾಂಗ್ರೆಸ್‌ಗೆ ಕ್ಷೇತ್ರಗಳಲ್ಲಿ ಅಭ್ಯರ್ಥಿ ಸಿಕ್ಕಿಲ್ಲ. ಶಾಸಕ, ಸಚಿವರ ಕುಟುಂಬದವರನ್ನೆ ಈ ಬಾರಿ ಕಣಕ್ಕೆ ಇಳಿಸಿದ್ದಾರೆ. ಕರ್ನಾಟಕದ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಅಸಹ್ಯ ವಾತಾವರಣವಿದೆ. ಕಾಂಗ್ರೆಸ್ ಪಕ್ಷ ಬೆಳಗಾವಿ ಜಿಲ್ಲೆಯಲ್ಲಿ ಹಾಲುಮತದ ಅಭ್ಯರ್ಥಿ ಕಣಕ್ಕೆ ಇಳಿಸುವುದಾಗಿ ಹೇಳಿತ್ತು. ಆದರೆ ಅವರಿಗೆ ನೀಡದೆ ವಂಚಿಸಿದೆ. ಡಾ. ಬಿ.ಆರ್. ಅಂಬೆಡ್ಕರ ಅವರಿಗೆ ತಾತ್ಸರವಾಗಿ ನಡೆದುಕೊಂಡ ಕಾಂಗ್ರೆಸ್ ಪಕ್ಷಕ್ಕೆ ದಲಿತರು ಈ ಬಾರಿ ಅವರಿಗೆ ಪಾಠ ಕಲಿಸಲಿದ್ದಾರೆ. ಕಾಂಗ್ರೆಸ್‌ಗೆ ಹಾಗೂ ವಿರೋಧ ಪಕ್ಷದವರಿಗೆ ನಿಂತ ನೆಲ ಕುಸಿದಂತಾಗಿದೆ. ಅಣ್ಣಾಸಾಹೇಬ್ ಜೊಲ್ಲೆ ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆಂಬ ವಿಶ್ವಾಸವಿದೆ ಎಂದರು.
ಈ ಸಂದರ್ಭದಲ್ಲಿ ಶಾಸಕಿ ಶಶಿಕಲಾ ಜೊಲ್ಲೆ, ಚಿಕ್ಕೋಡಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ ಅಪ್ಪಾಜಿಗೋಳ, ದುಂಡಪ್ಪ ಬೆಂಡವಾಡೆ, ಸಿದ್ದು ನರಾಟೆ, ಸುನೀಲ ಪಾಟೀಲ, ರಾಜೇಂದ್ರ ಗುಂದೆಶಾ ಸೇರಿದಂತೆ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ