ಪ್ರಗತಿವಾಹಿನಿ ಸುದ್ದಿ; ನಾಯ್ ಪಿಡಾವ್: ಚುನಾವಣೆಯಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಮಯನ್ಮಾರ್ ಮಿಲಿಟರಿ ದೇಶದ ನಾಯಕಿ ಸಾನ್ ಸೂಕಿ ಹಾಗೂ ಅಧ್ಯಕ್ಷ ವಿನ್ ಮೈಂಟ್ ಅವರನ್ನು ವಶಕ್ಕೆ ಪಡೆದುಕೊಂಡು ದೇಶದಲ್ಲಿ ಒಂದು ವರ್ಷ ತುರ್ತು ಪರಿಸ್ಥಿತಿ ಘೋಷಿಸಿದೆ.
ನವೆಂಬರ್ ನಲ್ಲಿ ನಡೆದ ಚುನಾವಣೆ ವೇಳೆ ವಂಚನೆ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು. ಇದು ಮಯನ್ಮಾರ್ ನಲ್ಲಿ ದೇಶದ ನಾಗರಿಕರು ಹಾಗೂ ಮಿಲಿಟರಿ ಸಂಘರ್ಷಕ್ಕೆ ಕಾರಣವಾಗಿತ್ತು. ಸೂಕಿ ಅವರ ನ್ಯಾಷನಲ್ ಲೀಗ್ ಫಾರ್ ಡೆಮಾಕ್ರಸಿ ಪಕ್ಷ ಚುನಾವಣೆಯಲ್ಲಿ ಬಹುಮತ ಪಡೆದುಕೊಂಡಿತ್ತಾದರೂ ಅಕ್ರಮವೆಸಗಿದೆ ಎಂದು ಮಿಲಿಟರಿ ಆರೋಪಿಸಿತ್ತು.
ಇದರ ಬೆನ್ನಲ್ಲೇ ಇಂದು ಬೆಳಿಗ್ಗೆ ಸೂಕಿ ಮತ್ತು ಅಧ್ಯಕ್ಷ ವಿನ್ ಮೈಂಟ್ ಅವರನ್ನು ರಾಜಧಾನಿ ನಾಯ್ ಪಿಡಾವ್ ನಲ್ಲಿ ಬಂಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ದೇಶದಲ್ಲಿ ಒ<ದು ವರ್ಷ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ