Kannada NewsKarnataka NewsNationalPolitics

NDA ಮೈತ್ರಿಕೂಟದಿಂದಲೇ ಮೈಸೂರು ಚಲೋ ಪಾದಯಾತ್ರೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಾಹಿತಿ

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ನಡೆಯಲಿರುವ ಪಾದಯಾತ್ರೆ NDA ಮೈತ್ರಿಕೂಟದ್ದಾಗಿರುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.

ನವದೆಹಲಿಯಲ್ಲಿ ಇಂದು ಮೈತ್ರಿಕೂಟದ ರಾಜ್ಯ ನಾಯಕರ ಸಭೆಯ ಬಳಿಕ ಸಚಿವ ಜೋಶಿ ಮಾಧ್ಯಮದವರೊಂದಿಗೆ ಮಾಹಿತಿ ಹಂಚಿಕೊಂಡರು.

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ಪರಮಾವಧಿ ಖಂಡಿಸಿ ಶನಿವಾರ ನಡೆಸಲಿರುವ ಮೈಸೂರು ಚಲೋ ಪಾದಯಾತ್ರೆಯಲ್ಲಿ ಜೆಡಿಎಸ್ ಕೂಡ ಭಾಗಿಯಾಗುತ್ತದೆ ಎಂದು ಹೇಳಿದರು.

ದೆಹಲಿಯಲ್ಲಿ ಇಂದು ನಡೆದ ಎನ್ ಡಿಎ ಮೈತ್ರಿಕೂಟದ ರಾಜ್ಯ ನಾಯಕರ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ನಿರ್ಧರಿಸಲಾಗಿದೆ ಎಂದು ತಿಳಿಸಿದರು.

‘ಮೈಸೂರು ಚಲೋ’ ಪಾದಯಾತ್ರೆ ಕುರಿತ ಈ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ BY ವಿಜಯೇಂದ್ರ, ರಾಜ್ಯ ಉಸ್ತುವಾರಿ ಅಗರವಾಲ್ RMD, ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವರಾದ HD ಕುಮಾರಸ್ವಾಮಿ ಅವರೆಲ್ಲ  ಭಾಗಿಯಾಗಿ ಪಾದಯಾತ್ರೆ ಯಶಸ್ಸಿಗೆ ಚರ್ಚೆ ನಡೆಸಲಾಯಿತು ಎಂದು ಜೋಶಿ ತಿಳಿಸಿದರು.

LS����

Related Articles

Back to top button