Kannada NewsKarnataka NewsLatest

*ವಿಶ್ವವಿಖ್ಯಾತ ಮೈಸೂರು ದಸರಾಗೆ ಚಾಲನೆ ನೀಡಿದ ನಾದಬ್ರಹ್ಮ ಹಂಸಲೇಖ*

ಪ್ರಗತಿವಾಹಿನಿ ಸುದ್ದಿ; ಮೈಸೂರು: ಇಂದಿನಿಂದ ನಾಡಿನಾದ್ಯಂತ ದಸರಾ ಸಂಭ್ರಮ ಮನೆ ಮಾಡಿದೆ. ವಿಶ್ವ ವಿಖ್ಯಾತ ಮೈಸೂರು ದಸರಾ-2023ಕ್ಕೆ ನಾದಬ್ರಹ್ಮ, ಸಂಗೀತ ನಿರ್ದೇಶಕ ಹಂಸಲೇಖ ಚಾಲನೆ ನೀಡಿದ್ದಾರೆ.

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಬೆಳಿಗ್ಗೆ 10-15ರಿಂದ 10:30ರ ಶುಭ ವೃಶ್ಚಿಕ ಲಗ್ನದಲ್ಲಿ ನಾದಬ್ರಹ್ಮ ಹಂಸಲೇಖ, ಮುಖ್ಯಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ ದೀಪ ಬೆಳಗಿ, ಚಾಮುಂಡಿ ದೇವಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ನಾಡ ಹಬ್ಬ ಮೈಸೂರು ದಸರಾಗೆ ಅದ್ದೂರಿ ಚಾಲನೆ ನೀಡಿದರು.

Home add -Advt

ಈ ವೇಳೆ ಸಚಿವರಾದ ಶಿವರಾಜ್ ತಂಗಡಗಿ, ಕೆ.ಜೆ.ಜಾರ್ಜ್, ಸಂಸದ ಪ್ರತಾಪ್ ಸಿಂಹ, ಶಾಸಕರಾದ ಜಿ.ಟಿ.ದೇವೇಗೌಡ, ತನ್ವೀರ್ ಸೇಠ್ ಸೇರಿದಂತೆ ಗಣ್ಯಾತಿಗಣ್ಯರು ಚಾಮುಂಡಿ ತಾಯಿಗೆ ಪುಷ್ಪಾರ್ಚನೆ ಮಾಡಿದರು.

Related Articles

Back to top button