
ಪ್ರಗತಿವಾಹಿನಿ ಸುದ್ದಿ: ನಾಡ ಹಬ್ಬ ಮೈಸೂರು ದಸರಾದಲ್ಲಿ ಏರ್ ಶೋ ಆಯೋಜನೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಮ್ಮತಿ ಸೂಚಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ನವದೆಹಲಿಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮೈಸೂರು ದಸರಾದಲ್ಲಿ ಏರ್ ಶೋಗೆ ಮನವಿ ಮಾಡಿದೆವು. ದಸರಾದಲ್ಲಿ ಏರ್ ಶೋ ಆಯೋಜನೆಗೆ ರಕ್ಷಣಾ ಸಚಿವರು ಒಪ್ಪಿಗೆ ನೀಡಿದ್ದಾರೆ ಎಂದರು.
ನಾಳೆ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ಅವಕಾಶ ಕೇಳಿದ್ದೇನೆ. ಅವಕಾಶ ಸಿಕ್ಕರೆ ಪ್ರಧಾನಿ ಮೋದಿಯವರನ್ನು ಭೇಟಿಯಾಗುತ್ತೇನೆ ಎಂದರು. ಈ ಮೂಲಕ ಈ ಬಾರಿ ಮೈಸೂರು ದಸರಾದಲ್ಲಿ ಏರ್ ಶೋ ಕೂಡ ಇರಲಿದ್ದು, ದಸರಾಗೆ ಬರುವವರು ಲೋಹದ ಹಕ್ಕಿಗಳ ಕಲರವವನ್ನೂ ಕಣ್ತುಂಬಿಕೊಳ್ಳಬಹುದು.