Kannada NewsKarnataka NewsLatest
*ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ರಿಂದ ದಸರಾ ಉದ್ಘಾಟನೆ: ಸಿಎಂ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಈ ಬಾರಿ ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ನಾಡಿನ ಹೆಸರಾಮ್ತ ಲೇಖಕಿ ಬಾನು ಮುಷ್ತಾಕ್ ಅವರು ನೆರವೇರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಈ ವಿಷಯ ತಿಳಿಸಿದ್ದಾರೆ. ಸೆ.22ರಿಂದ ಅಕ್ಟೋಬರ್ 2ರವರೆಗೆ ಮೈಸೂರು ದಸರಾ ಮಹೋತ್ಸವ ನಡೆಯಲಿದೆ. ಸೆ. 22ರಂದು ಮೈಸೂರು ದಸರಾಗೆ ಚಾಲನೆ ಸಿಗಲಿದೆ. ಈ ಬಾರಿ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಸ್ತಾಕ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.
ಬಾನು ಮುಷ್ತಾಕ್ ಅವರ ‘ಹೃದಯ ದೀಪ’ ಕೃತಿಗೆ ಬೂಕರ್ ಪ್ರಶಸ್ತಿ ಸಿಕ್ಕಿದೆ. ಬಹಳ ಸಂತೋಷದ ವಿಷಯ. ರೈತ ಹಾಗೂ ಕನ್ನಡ ಚಳುವಳಿಯಲ್ಲಿ ಕೆಲಸ ಮಾಡಿದ ನಾಡಿನ ಲೇಖಕಿಗೆ ಪ್ರತಿಷ್ಠಿತ ಪ್ರಶಸ್ತಿ ಸಿಕ್ಕಿರುವುದು ಹೆಮ್ಮೆಯ ಸಂಗತಿ. ಹೀಗಾಗಿ ಈ ಬಾರಿ ಮಹಿಳಾ ಲೇಖಕಿ ಮೈಸೂರು ದಸರಾ ಉದ್ಘಾಟನೆ ಮಾಡಲಿದ್ದಾರೆ ಎಂದು ತಿಳಿಸಿದರು.