Kannada NewsKarnataka NewsLatest
*ಚಾಮುಂಡಿ ತಾಯಿಗೆ ಪುಷ್ಪಾರ್ಚನೆ ಮಾಡಿ ವಿಶ್ವವಿಖ್ಯಾತ ಮೈಸೂರು ದಸರಾಗೆ ಅದ್ಧೂರಿ ಚಾಲನೆ ನೀಡಿದ ಲೇಖಕಿ ಬಾನು ಮುಷ್ತಾಕ್*


ಪ್ರಗತಿವಾಹಿನಿ ಸುದ್ದಿ: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ನಾಡಾದಿ ದೇವತೆ ಚಾಮುಂಡಿ ತಾಯಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ಮಾಡಿದರು.

ಚಾಮುಂಡಿ ಬೆಟ್ಟಕ್ಕೆ ತೆರಳಿ, ನಾಡ ದೇವಿ ಚಾಮುಂಡಿ ಮಾತೆ ದರ್ಶನ ಪಡೆದು ಬಳಿಕ ವಿಶೇಶ ಪೂಜೆ ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರು, ಲೇಖಕಿ ಬಾನು ಮುಷ್ತಾಕ್ ಬಳಿಕ ದಸರಾ ಉದ್ಘಾಟನಾ ವೇದಿಕೆಗೆ ಆಗಮಿಸಿದರು. 10:10ರಿಂದ 10:40ರ ನಡುವೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಲೇಖಕಿ ಬಾನು ಮುಷ್ತಾಕ್ ದಸರಾಗೆ ಅಧಿಕೃತ ಚಾಲನೆ ನೀಡಿದರು.

ಈ ವೇಳೆ ಸಿಎಂ ಸಿದ್ದರಾಮಯ್ಯ, ಸಚಿವರಾದ ಶಿವರಾಜ್ ತಂಗಡಗಿ, ಹೆಚ್.ಸಿ.ಮಹದೇವಪ್ಪ, ಹೆಚ್.ಕೆ.ಪಾಟೀಲ್, ವೆಂಕಟೇಶ್, ಶಾಸಕ ತನ್ವೀರ್ ಸೇಠ್, ಅಧಿಕಾರಿಗಳು ಸೇರಿದಂತೆ ಹಲವು ಗಣ್ಯರು ಚಾಮುಂಡಿ ಮಾತೆಗೆ ಪುಷ್ಪಾರ್ಚನೆ ಮಾಡಿದರು. ಈ ಮೂಲಕ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ನೀಡಲಾಗಿದೆ.