
ಪ್ರಗತಿವಾಹಿನಿ ಸುದ್ದಿ: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ. ಕ್ಯಾಪ್ಟನ್ ಅಭಿಮನ್ಯು ಆನೆ 6ನೇ ಬಾರಿಗೆ ತಾಯಿ ಚಾಮುಂಡಿ ದೇವಿ ವಿರಾಜಮಾನವಿಗಿರುವ ಅಂಬಾರಿಯನ್ನು ಹೊತ್ತು ಮೆರವಣಿಗೆಯಲ್ಲಿ ಸಾಗಲಿದ್ದಾನೆ.
ಇಂದು ಸಂಜೆ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಡ ಅದಿದೇವತೆ ಚಾಮುಂಡಿ ತಾಯಿಗೆ ಪುಷ್ಪಾರ್ಚನೆ ಮಾಡಲಿದ್ದಾರೆ. ಶುಭ ಕುಂಭ ಲಗ್ನದಲ್ಲಿ ಜಂಬೂಸವಾರಿಗೆ ಚಾಲನೆ ನೀಡಲಿದ್ದಾರೆ. ಸಂಜೆ 4:42ರಿಂದ 5:06ರ ನಡುವೆ ಸಲ್ಲುವ ಶುಭ ಮುಹೂರ್ತದಲ್ಲಿ ದಸರಾ ಜಂಭೂ ಸಾವಾರಿಗೆ ಚಾಲನೆ ನೀಡಲಿದ್ದಾರೆ.
750 ಕೆಜಿ ತೂಕದ ಚಿನ್ನದ ಅಂಬಾರಿ ಹೊತ್ತು ಅಭಿಮನ್ಯು ಆನೆ ಮೆರವಣಿಗೆಯಲ್ಲಿ ಸಾಗಲಿದೆ. ಅಭಿಮನ್ಯು ಜೊತೆಗೆ 14 ಆನೆಗಳು ಸಾಗಲಿವೆ. ಜೊತೆಗೆ 120ಕ್ಕೂ ಹೆಚ್ಚು ಕಲಾತಂಡಗಳು, ವಿವಿಧ ಜಿಲ್ಲೆಗಳ ಸ್ತಬ್ಧಚಿತ್ರಗಳು ಪಾಲ್ಗೊಳ್ಳಲಿವೆ. ಅರಮನೆಯಿಂದ ಬನ್ನಿಮಂಟಪದವರೆಗೂ ಜಂಬೂಸವಾರಿ ಸಾಗಲಿದೆ.