
ಪ್ರಗತಿವಾಹಿನಿ ಸುದ್ದಿ: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೊತ್ಸವದ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ನಾಡ ಅದಿದೇವತೆ ಚಾಮುಂಡಿ ತಾಯಿ ಉತ್ಸವ ಮೂರ್ತಿ ಮೈಸೂರು ಅರಮನೆಗೆ ಆಗಮನವಾಗಿದೆ.
ಚಾಮುಂಡಿಬೆಟ್ಟದಿಂದ ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕವಾಗಿ ಚಾಮುಂಡಿ ದೇವಿ ಉತ್ಸವ ಮೂರ್ತಿಯನ್ನು ಅರಮನೆಗೆ ಕರೆತರಲಾಗಿದೆ. ಅರಮನೆಯಲ್ಲಿ ದಸರಾ ಉತ್ಸವದ ಸಂಭ್ರಮ ಕಳೆಕಟ್ಟಿದೆ. 750 ಕೆಜಿ ಚಿನ್ನದ ಅಂಬರಿಯಲ್ಲಿ ವಿರಾಜಮಾನವಾಗಿ ಜಂಬೂಸವಾರಿ ಮೆರವಣಿಗೆಯಲ್ಲಿ ಸಾಗಲಿರುವ ತಾಯಿ ಚಾಮುಂಡೇಶ್ವರಿಯನ್ನು ಕಣ್ತುಂಬಿಕೊಳ್ಳಲು ಕೋಟ್ಯಂತರ ಜನರು ಕಾತರದಿಂದ ಕಾಯುತ್ತಿದ್ದಾರೆ.
ಇಂದು ಸಂಜೆ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಡ ಅದಿದೇವತೆ ಚಾಮುಂಡಿ ತಾಯಿಗೆ ಪುಷ್ಪಾರ್ಚನೆ ಮಾಡಲಿದ್ದಾರೆ. ಶುಭ ಕುಂಭ ಲಗ್ನದಲ್ಲಿ ಜಂಬೂಸವಾರಿಗೆ ಚಾಲನೆ ನೀಡಲಿದ್ದಾರೆ. ಸಂಜೆ 4:42ರಿಂದ 5:06ರ ನಡುವೆ ಸಲ್ಲುವ ಶುಭ ಮುಹೂರ್ತದಲ್ಲಿ ದಸರಾ ಜಂಬೂಸಾವಾರಿಗೆ ಚಾಲನೆ ನೀಡಲಿದ್ದಾರೆ. ಅರಮನೆಯಿಂದ ಬನ್ನಿಮಂಟಪದವರೆಗೂ ಜಂಬೂಸವಾರಿ ಮೆರವಣಿಗೆ ಸಾಗಲಿದೆ.