Kannada NewsKarnataka NewsLatest

*ಮೈಸೂರು ದಸರಾ ಮಹೋತ್ಸವ-2026: ಗಜಪಯಣಕ್ಕೆ ಚಾಲನೆ*

ಪ್ರಗತಿವಾಹಿನಿ ಸುದ್ದಿ: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ರ ಮೊದಲ ಹಂತದ ಗಜಪಯಣಕ್ಕೆ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ದಸರಾ ಗಜಪಡೆಗೆ ಚಾಲನೆ ನೀಡಿದ್ದಾರೆ.

ಮೈಸೂರು ಜಿಲ್ಲೆಯ ಹುಣಸೂರಿನ ವೀರನಹೊಸಳ್ಳಿಯಲ್ಲಿ ಬೆಳಗ್ಗೆ 10 ರಿಂದ 10:28ರ ಶುಭ ತುಲಾ ಲಗ್ನದಲ್ಲಿ ಗಜಪಡೆಗೆ ಪೂಜೆ ಸಲ್ಲಿಸಿ, ಗಜಪಡೆಗೆ ಫಲತಾಂಬೂಲ ನೀಡುವ ಮೂಲಕ ಚಾಲನೆ ನೀಡಲಾಯಿತು. ಆನಂತರ ಗಜಪಡೆ ಕಾಡಿನಿಂದ ನಾಡಿನತ್ತ ಹೆಜ್ಜೆ ಹಾಕಿವೆ.

Home add -Advt

ದಸರಾ ಗಜಪಯಣದ ಮೊದಲ ಹಂತದಲ್ಲಿ ಒಟ್ಟು 9 ಆನೆಗಳಾದ ಧನಂಜಯ, ಮಹೇಂದ್ರ, ಏಕಲವ್ಯ, ಪ್ರಶಾಂತ, ಗೋಪಿ, ಶ್ರೀರಾಮ, ಸುಗ್ರೀವ, ಲಕ್ಷ್ಮೀ ಹಾಗೂ ಅಭಿಮನ್ಯು ಆಗಮಿಸಿವೆ. ಕಾರ್ಯಕ್ರಮದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಭಾಗಿಯಾಗಲಿದ್ದರು.

ಇದೇ ವೇಳೆ ಸತತ 6 ವರ್ಷಗಳ ಕಾಲ ನಿರ್ವಿಘ್ನವಾಗಿ ಜಂಬೂ ಸವಾರಿ ನೆರವೇರಿಸಿಕೊಟ್ಟಿದ್ದ ಅಭಿಮನ್ಯು ಆನೆಗೆ ಗಜಪಯಣದ ವೇಳೆ ಅರಣ್ಯ ಇಲಾಖೆಯು ವಿಶೇಷ ಬೀಳ್ಕೊಡುಗೆ ಸಲ್ಲಿಸಿದೆ.

Related Articles

Back to top button