
ಪ್ರಗತಿವಾಹಿನಿ ಸುದ್ದಿ: ಮೈಸೂರು ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಜಂಬೂಸವರಿಗೆ ಕ್ಷಣ ಗಣನೆ ಆರಂಭವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ್ದಾರೆ.
ಮಧ್ಯಾಹ್ನ 1ರಿಂದ 1.18ರ ಶುಭ ಧನುರ್ ಲಗ್ನದಲ್ಲಿ ಸಿಎಂ ಸಿದ್ದರಾಮಯ್ಯ ಕೋಟೆ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದರು. ಈ ವೇಳೆ ಸಿಎಂ ಈಡುಗಾಯಿ ಒಡೆದರು.
ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಲಾಗಿದೆ. ಇಂದು ಜಂಬೂಸವಾರಿ ನಡೆಯಲಿದೆ. ಹಿಂದೆ ಸಿಎಂ ಆಗಿದ್ದಾಗಲೂ ದಸರಾದಲ್ಲಿ ಭಾಗಿಯಾಗಿದ್ದೆ. ಸಿಎಂ ಆಗಿ 8 ಬಾರಿ ದಸರಾಗೆ ಬಂದಿದ್ದೇನೆ. ಜನರ ಆಶಿರ್ವಾದದಿಂದ ಇದು ಸಾಧ್ಯವಾಗಿದೆ ಎಂದರು.
ಇದೇ ವೇಳೆ ಜಂಬೂಸವಾರಿ ಮೆರವಣಿಗೆಗಳಲ್ಲಿ ಸಾಗುವ ಸ್ತಬ್ಧಚಿತ್ರಗಳ ಮೆರವಣಿಗೆಗೆ ಚಾಲನೆ ದೊರೆತಿದೆ. ಈ ಬಾರಿ ಮೆರವಣಿಗೆಯಲ್ಲಿ 58 ಸ್ತಬ್ಧಚಿತ್ರಗಳು ಭಾಗವಹಿಸಿವೆ.