Kannada NewsKarnataka NewsLatest
*ಸಾಂಸ್ಕೃತಿಕ ನಗರಿಯ ಬಾನಂಗಳದಲ್ಲಿ ಲೋಹದ ಹಕ್ಕಿಗಳ ಕಲರವ; ದಸರಾ ಏರ್ ಶೋಗೆ ಚಾಲನೆ*
ಪ್ರಗತಿವಾಹಿನಿ ಸುದ್ದಿ; ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಹಿನ್ನೆಲೆಯಲ್ಲಿ ಆಯೋಜಿಸಲಾಗಿರುವ ವೈಮಾನಿಕ ಪ್ರದರ್ಶನಕ್ಕೆ ಚಾಲನೆ ದೊರೆತಿದೆ. ಸಾಂಸ್ಕೃತಿಕ ನಗರಿ ಮೈಸೂರಿನ ಬಾನಂಗಳದಲ್ಲಿ ಲೋಹದ ಹಕ್ಕಿಗಳ ಕಲರವ ಮನಸೂರೆಗೊಳಿಸುತ್ತಿದೆ.
ಮೈಸೂರಿನ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಏರ್ ಶೋ ಆರಂಭವಾಗಿದೆ. ಬಾನಂಗಳದಲ್ಲಿ ವಿವಿಧ ವಿಮಾನಗಳು ಚಿತ್ತಾರ ಬಿಡಿಸಿದ್ದು, ಲಕ್ಷಾಂತರ ಜನರು ವೈಮಾನಿಕ ಪ್ರದರ್ಶನಕ್ಕೆ ಸಾಕ್ಷಿಯಾಗಿದ್ದಾರೆ.
ಏರ್ ಶೋವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಹೆಚ್.ಸಿ ಮಹದೇವಪ್ಪ ಸೇರಿದಂತೆ ಹಲವು ಗಣ್ಯರು ವೀಕ್ಷಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ