Kannada NewsKarnataka NewsLatest
ಬೆಳಗಾವಿಯಲ್ಲಿ ಭೀಕರ ಅಪಘಾತ; ಸಹೋದರರಿಬ್ಬರ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ವೇಗವಾಗಿ ಬಂದ ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತಕ್ಕೆ ಸಹೋದರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಮೃತರನ್ನು ಗೋಕಾಕ್ ತಾಲೂಕಿನ ಶಿವಾಪುರ ಕೊನ್ನೋರ್ ಗ್ರಾಮದ ಶಿವಾನಂದ ಕಬಾಡಗಿ (21) ಹಾಗೂ ಕುಮಾರ್ ಕಬಾಡಗಿ (19) ಎಂದು ಗುರುತಿಸಲಾಗಿದೆ.
ಬೈಕ್ ನಲ್ಲಿ ಮೂವರು ತೆರಳುತ್ತಿದ್ದರು. ಬೈಕ್ ಸವಾರನ ಅಜಾಗರೂಕತೆ, ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ವೇಗವಾಗಿ ಬಂದ ಬೈಕ್ ಝಾಡಶಹಾಪುರ ಗ್ರಾಮದ ಬ್ರಹ್ಮಲಿಂಗ ದೇವಸ್ಥಾನ ಸಮೀಪ ಕಲ್ಲಿನ ಡಿವೈಡರ್ ಗೆ ಡಿಕ್ಕಿಹೊಡೆದಿದೆ. ಪರಿಣಾಮ ಇಬ್ಬರು ಸಹೋದರರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.
ಇವರು ಅಶೋಕ್ ಐರನ್ ಪ್ಲ್ಯಾಂಟ್ ನಲ್ಲಿ ಕೆಲಸ ಮಾಡುತ್ತಿದ್ದರು.
ಸ್ಥಳಕ್ಕೆ ಬೆಳಗಾವಿ ಗ್ರಾಮಾಂತರ ಸಿಪಿಐ ಸುನೀಲ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ




