*ಮೈಸೂರು ದಸರಾ: ದೀಪಾಲಂಕಾರ 10-12 ದಿನಗಳ ಕಾಲ ವಿಸ್ತರಣೆ*

ಪ್ರಗತಿವಾಹಿನಿ ಸುದ್ದಿ: ಮೈಸೂರು ದಸರಾಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನ ವಿದ್ಯುತ್ ದೀಪಾಲಂಕಾರವನ್ನು 10-12 ದಿನಗಳವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಡಿಸಿಎಂ, ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಈ ವ್ಯವಸ್ಥೆ ಮಾಡಲಾಗಿದೆ. ನಾನು ಇಂಧನ ಸಚಿವನಾಗಿದ್ದಾಗ ಮಾಡಿದ್ದಕ್ಕಿಂತ ಈ ಬಾರಿ ಅತ್ಯುತ್ತಮವಾಗಿ ದೀಪಾಲಂಕಾರ ಮಾಡಲಾಗಿದೆ. ಅಲ್ಲದೆ ಒಂದೂವರೆ ಸಾವಿರ ಡ್ರೋನ್ ಗಳ ಶೋ ವ್ಯವಸ್ಥೆ ಮಾಡಲಾಗಿದೆ. ಸಾಂಸ್ಕೃತಿಕ ನಾಡಿನಲ್ಲಿ ನಮ್ಮ ಜನ ನಮ್ಮ ಸಂಸ್ಕೃತಿಯನ್ನು ಕಣ್ತುಂಬಿಕೊಂಡು ಆನಂದಿಸಲಿ ಎಂದು … Continue reading *ಮೈಸೂರು ದಸರಾ: ದೀಪಾಲಂಕಾರ 10-12 ದಿನಗಳ ಕಾಲ ವಿಸ್ತರಣೆ*