*ಡಾ.ಪದ್ಮಾಮೂರ್ತಿ ಅವರಿಗೆ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ*

ದಸರಾ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ

ಪ್ರಗತಿವಾಹಿನಿ ಸುದ್ದಿ; ಮೈಸೂರು: ವಿಶ್ವ ವಿಖ್ಯಾತ ದಸರಾ ಪ್ರಯುಕ್ತ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಡಾ.ಪದ್ಮಾಮೂರ್ತಿ ಅವರಿಗೆ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ನೀಡಿ ಸನ್ಮಾನಿಸಿದ ಸಿಎಂ ಸಿದ್ದರಾಮಯ್ಯ, ನಮ್ಮ ಸರ್ಕಾರ ಕಲೆ ಸಾಹಿತ್ಯಕ್ಕೆ ಸಂಪೂರ್ಣ ಸಹಕಾರ ನೀಡಲಿದೆ ಎಂದು ಹೇಳಿದರು.
ಡಾ.ಪದ್ಮಾಮೂರ್ತಿ ಕಲಾ ಸೇವೆ ಅಪೂರ್ವ. ಡಾ.ಪದ್ಮಾಮೂರ್ತಿ ಅವರ ಕಲಾ ಸೇವೆ ಅಪೂರ್ವವಾದದ್ದು. ಅಂತಾರಾಷ್ಟ್ರೀಯ ಮಟ್ಟದ ಕಲಾವಿದರಾದ ಇವರು ದೀರ್ಘಕಾಲ ಸಂಗೀತ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಇವರನ್ನು ಸರ್ಕಾರ ಗುರುತಿಸಿ ದಸರಾ ಸಂದರ್ಭದಲ್ಲಿ ಸಂಗೀತ ವಿದ್ವಾನ್ ಪ್ರಶಸ್ತಿ ನೀಡಿರುವುದು ಶ್ಲಾಘನೀಯ. 91ರ ವಯಸ್ಸಲ್ಲೂ ಅತ್ಯಂತ ಸ್ಪಷ್ಟ ಧ್ವನಿ ಹೊಂದಿದ್ದಾರೆ ಎಂದು ಮುಖ್ಯಮಂತ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.
ಕೃಷ್ಣರಾಜ ಕ್ಷೇತ್ರದ ಶಾಸಕರಾದ ಟಿ.ಎಸ್.ಶ್ರೀವತ್ಸ ಅವರು ಅಧ್ಯಕ್ಷತೆ ವಹಿಸಿದ್ದರು. ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ದೀಪಾಲಂಕಾರವನ್ನು ಉದ್ಘಾಟಿಸಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಮಹಾಪೌರರಾದ ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ್ ತಂಗಡಗಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮತ್ತು ಶಾಸಕರುಗಳು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ