ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸೆಪ್ಟೆಂಬರ್ 26 ರಿಂದ ಪ್ರಾರಂಭವಾಗಲಿರುವ ನಾಡಹಬ್ಬ ಮೈಸೂರು ದಸರಾವನ್ನು ಉದ್ಘಾಟಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಮ್ಮತಿಸಿದ್ದಾರೆ.
ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ರಾಷ್ಟ್ರಪತಿಯವರನ್ನು ಆಹ್ವಾನಿಸಿ ಸೆಪ್ಟೆಂಬರ್ 6 ರಂದು ಮುಖ್ಯಮಂತ್ರಿಯವರು ಪತ್ರ ಬರೆದಿದ್ದರು. ಇದಕ್ಕೆ ರಾಷ್ಟ್ರಪತಿಯವರು ಸಮ್ಮತಿ ಸೂಚಿಸಿರುವುದಾಗಿ ರಾಷ್ಟ್ರಪತಿ ಭವನದ ಅಧಿಕಾರಿಗಳು ಮುಖ್ಯಮಂತ್ರಿ ಕಚೇರಿಗೆ ಪತ್ರದ ಮೂಲಕ ಮಾಹಿತಿ ನೀಡಿದ್ದಾರೆ.
ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಬಾರಿ ಮೈಸೂರು ದಸರಾ ಸಾಂಪ್ರದಾಯಿಕವಾಗಿ ಹಾಗೂ ಅರಮನೆಗೆ ಮಾತ್ರ ಸೀಮಿತಗೊಳಿಸಿ ಆಚರಿಸಲಾಗಿತ್ತು. ಆದರೆ ಈ ಬಾರಿ ವಿಶ್ವ ವಿಖ್ಯಾತ ಮೈಸೂರು ದಸರಾವನ್ನು ಅದ್ದೂರಿಯಾಗಿ ಆಚರಿಸಲು ಸರ್ಕಾರ ಸಿದ್ಧತೆ ನಡೆಸಿದ್ದು, ಈ ಮೂಲಕ ಇದೇ ಮೊದಲ ಬಾರಿಗೆ ಮೈಸೂರು ದಸರಾವನ್ನು ರಾಷ್ಟ್ರಪತಿಗಳು ಉದ್ಘಾಟಿಸಲಿರುವುದು ವಿಶೇಷ.
ಬೆಳಗಾವಿಯಲ್ಲಿ ಕೇಂದ್ರ ನೆರೆ ಅಧ್ಯಯನ ತಂಡ; ಹಾನಿ ಪರಿಶೀಲನೆ
https://pragati.taskdun.com/latest/belagavicentral-study-teamflood-damage-inspection/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ