Latest

ಚಾಮುಂಡಿ ಉತ್ಸವ ಮೂರ್ತಿ ಮೆರವಣಿಗೆ ಆರಂಭ

ಪ್ರಗತಿವಾಹಿನಿ ಸುದ್ದಿ; ಮೈಸೂರು: ಅರಮನೆ ನಗರಿ ಮೈಸೂರಿನಲ್ಲಿ ನಾಡಹಬ್ಬ ದಸರಾ ಮಹೋತ್ಸವ ಕಳೆಕಟ್ಟಿದ್ದು, ಐತಿಹಾಸಿಕ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಚಾಮುಂಡಿ ದೇವಿಯ ಉತ್ಸವ ಮೆರವಣಿಗೆ ಆರಂಭವಾಗಿದೆ.

ವಿಶ್ವ ವಿಖ್ಯಾತ ಜಂಬೂಸವಾರಿ ಈ ಬಾರಿ ಕೂಡ ಅರಮನೆ ಆವರಣೆಕ್ಕೆ ಸೀಮಿತವಾಗಿರಲಿದ್ದು, ಆದರೆ ಈ ಬಾರಿ ಉತ್ಸವ ಮೂರ್ತಿ ಮೆರವಣಿಗೆ ಇರುವುದು ವಿಶೇಷ. ಚಾಮುಂಡಿ ಬೆಟ್ಟದಿಂದ ಚಾಮುಂಡಿ ದೇವಿಯ ಉತ್ಸವ ಮೆರವಣಿಗೆ ಬೆಳಿಗ್ಗೆಯಿಂದ ಆರಂಭವಾಗಿದ್ದು, ಕೆಲವೇ ಹೊತ್ತಲ್ಲಿ ಅರಮನೆ ಆವರಣಕ್ಕೆ ಬಂದು ತಲುಪಲಿದೆ.

Related Articles

ಇಂದು ಸಂಜೆ ಜೋಡಿ ನಂದಿಧ್ವಜ ಸ್ತಂಭಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ 4:30 ರಿಂದ 4:46ರ ಶುಭ ಮೀನ ಲಗ್ನದಲ್ಲಿ ಕೋಟೆ ಆಂಜನೇಯ ದೇಗುಲದ ಬಳಿ ಪೂಜೆ ಸಲ್ಲಿಸಲಿದ್ದಾರೆ. 750 ಕೆಜಿ ಚಿನ್ನದ ಅಂಬಾರಿಯಲ್ಲಿ ವಿರಾಜಮಾನವಾಗುವ ಚಾಮುಂಡಿ ದೇವಿಗೆ ಸಂಜೆ 5ರಿಂದ 5:30ಕ್ಕೆ ಸಲ್ಲುವ ಶುಭ ಲಗ್ನದಲ್ಲಿ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂಸವಾರಿಗೆ ಚಾಲನೆ ನೀಡಲಿದ್ದಾರೆ.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button