Latest

ನಂದಿಧ್ವಜ ಕಂಭಕ್ಕೆ ಪುಷ್ಪಾರ್ಚನೆ ನೆರವೇರಿಸಿದ ಸಿಎಂ; ಜಂಬೂ ಸವಾರಿಗೆ ಕ್ಷಣಗಣನೆ

ಪ್ರಗತಿವಾಹಿನಿ ಸುದ್ದಿ; ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಐತಿಹಾಸಿಕ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಜಂಬೂ ಸವಾರಿ ಆರಂಭಕ್ಕೂ ಮುನ್ನ ಸಿಎಂ ಬಸವರಾಜ್ ಬೊಮ್ಮಾಯಿ ನಂದಿಧ್ವಜ ಕಂಬಕ್ಕೆ ಪೂಜೆ ಸಲ್ಲಿಸಿದರು.

ಮಧ್ಯಾಹ್ನ 2:36ರಿಂದ 2:50ರ ಶುಭ ಮಕರ ಲಗ್ನದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಕುಟುಂಬ ಸಮೇತರಾಗಿ ಮೈಸೂರು ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜ ಕಂಭಕ್ಕೆ ಪುಷ್ಪಾರ್ಚನೆ ಮಾಡಿದರು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಎಸ್.ಟಿ.ಸೋಮಶೇಖರ್, ಸಚಿವ ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರ್.

ಬಳಿಕ ಸಂಜೆ 5:7ರಿಂದ 5:18ರವರೆಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಜಂಬೂ ಸವಾರಿ ಮೆರವಣಿಗೆ ನಡೆಯಲಿದೆ. ಅಭಿಮನ್ಯು ಆನೆ ಮೂರನೇ ಬಾರಿಗೆ ಅಂಬಾರಿ ಹೊತ್ತು ಸಾಗಿದ್ದು, ಅರ್ಜುನ ನಿಶಾನೆ, ಚೈತ್ರ ಮತ್ತು ಕಾವೇರಿ ಕುಮ್ಕಿ ಆನೆಗಳಾಗಿ ಜಂಬೂ ಸವಾರಿಯಲ್ಲಿ ಸಾಗಿವೆ.

ಜಂಬೂ ಸವಾರಿ ಮೆರವಣಿಗೆಯಲ್ಲಿ 47 ಸ್ಥಬ್ಧಚಿತ್ರಗಳು ಭಾಗವಹಿಸಿದ್ದು, 31 ಜಿಲ್ಲೆಗಳ ಕಲೆ, ಸಾಹಿತ್ಯ, ಇತಿಹಾಸವನ್ನು ಪ್ರಾಮುಖ್ಯತೆ ಪ್ರತಿನಿಧಿಸುವ ಸ್ಥಬ್ಧಚಿತ್ರಗಳು ಮೆರವಣಿಗೆಯಲ್ಲಿ ಸಾಗಿವೆ. ಬೆಳಗಾವಿ ಜಿಲ್ಲಾಡಳಿತದಿಂದ ರೆಣುಕಾ ಯೆಲ್ಲಮ್ಮ ದೇವಸ್ಥಾನದ ಸ್ಥಬ್ದಚಿತ್ರ ಪ್ರದರ್ಶನವಾಗುತ್ತಿದೆ. ಇನ್ನು ದಿ.ಪುನೀತ್ ರಾಜ್ ಕುಮಾರ್ ಅವರ ಸ್ಥಬ್ಧಚಿತ್ರ ಪ್ರದರ್ಶನವಾಗುತ್ತಿರುವುದು ಮತ್ತೊಂದು ವಿಶೇಷ.

ಅರಮನೆಯಿಂದ ಕೆ ಆರ್ ಸರ್ಕಲ್, ಸಯ್ಯಾಜಿ ರಾವ್ ರಸ್ತೆ, ಆಯುರ್ವೇದಿಕ್ ವೃತ್ತ, ಆರ್ ಎಂ ಸಿ, ತಿಲಕ್ ನಗರ ರಸೆಗಳ ಮೂಲಕ ಜಂಬೂ ಸವಾರಿ ಬನ್ನಿ ಮಂಟಪ ತಲುಪಲಿದೆ.

ಸೇನಾ ಹೆಲಿಕಾಪ್ಟರ್ ಪತನ; ಪೈಲಟ್ ದುರ್ಮರಣ

https://pragati.taskdun.com/latest/an-indian-armycheetah-helicopter-crashedarunachal-pradeshpilot-death/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button