ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಈ ಬಾರಿ ಮೈಸೂರು ದಸರಾ ಉದ್ಘಾಟಕರನ್ನಾಗಿ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರನ್ನು ಆಹ್ವಾನಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಮುಖ್ಯಮಂತ್ರಿಯವರು, ದಸರಾ ದಿನದಂದು ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ, ದಸರಾ ಉದ್ಘಾಟನೆ ಮಾಡಲು ಹಿರಿಯ ಮುತ್ಸದ್ದಿ ಎಸ್.ಎಂ. ಕೃಷ್ಣ ಅವರನ್ನು ಆಹ್ವಾನಿಸಲಾಗುವುದು. ಅವರು ಮುಖ್ಯಮಂತ್ರಿಯಾಗಿ ಹಾಗೂ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ, ನಾಡಿನ ಅಭಿವೃದ್ಧಿಗೆ ಗಣನೀಯ ಕೊಡುಗೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಆಹ್ವಾನಿಸಲಾಗುತ್ತಿದೆ ಎಂದು ತಿಳಿಸಿದರು.
ಈ ವೇಳೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಉಪಸ್ಥಿತರಿದ್ದರು.
ಮತ್ತೊಂದು ಕಚೇರಿ ಉತ್ತರ ಕರ್ನಾಟಕಕ್ಕೆ ಸ್ಥಳಾಂತರ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ