

ಪ್ರಗತಿವಾಹಿನಿ ಸುದ್ದಿ; ಮೈಸೂರು: ವಿಶ್ವ ವಿಖ್ಯಾತ ಐತಿಹಾಸಿಕ ಮೈಸೂರು ದಸರಾ ಜಂಬೂ ಸವಾರಿಗೆ ಅದ್ದೂರಿ ಚಾಲನೆ ದೊರೆತಿದೆ.
ಅಂಬಾರಿಯಲ್ಲಿ ವಿರಾಜಮಾನವಾದ ನಾಡ ಅದಿದೇವತೆ ಚಾಮುಂಡಿ ದೇವಿ ಮೂರ್ತಿಗೆ ಸಂಜೆ 4:40ರಿಂದ 5 ಗಂಟೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಪುಷ್ಪಾರ್ಚನೆ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ರಾಜ ಯದುವೀರ್ ಒಡೆಯರ್, ಸಚಿವರು, ಮೈಸೂರು ಮೇಯರ್ ಚಾಲನೆ ನೀಡಿದರು.

750 ಕೆಜಿ ತೂಕತ ಚಿನ್ನದ ಅಂಬಾರಿ ಹೊತ್ತ ಅಭಿಮನ್ಯು ಆನೆ ಜಂಬೂ ಸವಾರಿ ಮೆರವಣಿಗೆಯಲ್ಲಿ ರಾಜಗಾಂಭೀರ್ಯದಿಂದ ಹೆಜ್ಜೆ ಹಾಕುತ್ತ ಸಾಗಿದ್ದು, ಲಕ್ಷಾಂತರ ಜನರು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ