Latest

ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ; ಕೊನೆಗೂ ಸಿಕ್ಕಿಬಿದ್ದ 7ನೇ ಆರೋಪಿ

ಪ್ರಗತಿವಾಹಿನಿ ಸುದ್ದಿ; ಮೈಸೂರು: ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು 7ನೇ ಆರೋಪಿಯನ್ನು ಬಂಧಿಸಿದ್ದಾರೆ.

ಮೈಸೂರು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಸತತ ಕಾರ್ಯಾಚಾರಣೆ ನಡೆಸಿದ್ದ ಪೊಲೀಸರು ಘಟನೆ ನಡೆದು 82 ಗಂಟೆಗಳ
ಬಳಿಕ 6 ಆರೋಪಿಗಳನ್ನು ಬಂಧಿಸಿದ್ದರು. ಆದರೆ ಪ್ರಕರಣದ 7ನೇ ಆರೋಪಿ ತಲೆಮರೆಸಿಕೊಂಡಿದ್ದ. ಆತನಿಗಾಗಿ ಶೋಧ ಕಾರ್ಯ ಮುಂದುವರೆಸಿದ್ದರು.

Related Articles

ಇದೀಗ ತಮಿಳುನಾಡಿನಲ್ಲಿ ತಲೆ ಮರೆಸಿಕೊಂಡಿದ್ದ 7ನೇ ಆರೋಪಿಯನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. 7 ಆರೋಪಿಗಳಲ್ಲಿ ಓರ್ವ ಬಾಲಾರೋಪಿಯಾಗಿದ್ದು, ಬಂಧಿತರು ಕೊಲೆ, ದರೋಡೆ ಸೇರಿದಂತೆ ಹಲವು ಕ್ರಿಮಿನಲ್ ಹಿನ್ನೆಲೆಯುಳ್ಳವರು ಎಂದು ವಿಚಾರಣೆ ವೇಳೆ ತಿಳಿದುಬಂದಿದೆ.
ಗೀಸರ್ ನಿಂದ ವಿಷಾನೀಲ ಸೋರಿಕೆ; ಸ್ನಾನಕ್ಕೆ ಹೋಗಿದ್ದ ವಿದ್ಯಾರ್ಥಿನಿ ದಾರುಣ ಸಾವು

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button