Latest

*ಮುಡಾ ಹಗರಣ: ಬರೋಬ್ಬರಿ 100 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ED*

ಪ್ರಗತಿವಾಹಿನಿ ಸುದ್ದಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ- ಮುಡಾ ನಿವೇಶನ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಬರೋಬ್ಬರಿ 100 ಕೋಟಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ.

ಈ ಬಗ್ಗೆ ಬೆಂಗಳೂರು ಇಡಿ ಅಧಿಕಾರಿಗಳು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ಈವರೆಗೆ 92 ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಸಿದ್ದರಾಮಯ್ಯ ಪತ್ನಿ ಸೇರಿದಂತೆ ಇತರರಿಗೆ ಸೇರಿದ ನಿವೇಶನಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.

ಒಟ್ಟಾರೆ ಮುಡಾ ಅಕ್ರಮಕ್ಕೆ ಸಂಭಂಧಿಸಿದಂತೆ ಈವರೆಗೆ 400 ಕೋಟಿ ಆಸ್ತಿ ಜಪ್ತಿ ಮಡಲಾಗಿದೆ ಎಂದು ತಿಳಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button