Latest

ಮೈಸೂರು ಪೋಕ್ಸೋ ಪ್ರಕರಣ : ಆರೋಪಿಗೆ 43 ವರ್ಷ ಜೈಲು ಶಿಕ್ಷೆ ವಿಧಿಸಿದ ವಿಶೇಷ ನ್ಯಾಯಾಲಯ

ಪ್ರಗತಿವಾಹಿನಿ ಸುದ್ದಿ, ಮೈಸೂರು: ಬಾಲಕಿ ಮೇಲೆ ಲೈಂಗಿಕ ದೌರ್ಜವ್ಯವೆಸಗಿದ ಬಿಹಾರ ಮೂಲದ ವ್ಯಕ್ತಿಗೆ ಮೈಸೂರಿನ ಪೋಕ್ಸೋ ವಿಶೇಷ ನ್ಯಾಯಾಲಯ 43 ವರ್ಷಗಳ ಕಾಲ ಕಠಿಣ ಶಿಕ್ಷೆ ವಿಧಿಸಿ ಆದೇಶಿದೆ.

ತಿ.ನರಸೀಪುರ ತಾಲೂಕಿನ ಫಾರಂ ಹೌಸ್ ನಲ್ಲಿ ಕುದುರೆಗಳಿಗೆ ಲಾಳ ಕಟ್ಟುವ ಕೆಲಸ ಮಾಡಿಕೊಂಡಿದ್ದ ನಾಜೀಮ್ ಎಂಬಾತ ಶಿಕ್ಷೆಗೆ ಗುರಿಯಾಗಿದ್ದಾನೆ.

ಈತ ಫಾರ್ಮ್ ಹೌಸ್ ನಲ್ಲಿ ಕೆಲಸ ಮಾಡುತ್ತಿದ್ದು 10 ವರ್ಷದ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ದೌರ್ಜನ್ಯವೆಸಗಿದ್ದ. ಈ ಬಗ್ಗೆ ಯಾರಿಗಾದರೂ ಹೇಳಿದರೆ ಸಾಯಿಸುವುದಾಗಿ ಬೆದರಿಕೆ ಹಾಕಿದ್ದ. ಈ ಬಗ್ಗೆ ಬಾಲಕಿ ಪೋಷಕರಿಗೆ ಮಾಹಿತಿ ನೀಡಿದ್ದಳು.

ಪೋಷಕರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶೈಮಾ ಖಮ್ರೋಜ್ ಅವರು ಆರೋಪಿಗೆ 43 ವರ್ಷ ಶಿಕ್ಷೆ, 51 ಸಾವಿರ ದಂಡ ವಿಧಿಸಿದ್ದಾರೆ. ಜತೆಗೆ ಬಾಲಕಿ 7 ಲಕ್ಷ ರೂ. ಪರಿಹಾರ ಪಡೆಯಲು ಅರ್ಹಳು ಎಂದು ಆದೇಶ ಮಾಡಿದ್ದಾರೆ.

ಸರಕಾರದ ಪರವಾಗಿ ವಿಶೇಷ  ಅಭಿಯೋಜಕಿ ಕೆ.ಬಿ. ಜಯಂತಿ ವಾದ ಮಂಡಿಸಿದ್ದರು.

ಬಿಜೆಪಿಯಲ್ಲಿ ಭಿನ್ನಮತವಿಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button