ಬಿಜೆಪಿ ಮುಖಂಡನ ಬರ್ಬರ ಹತ್ಯೆ

ಪ್ರಗತಿವಾಹಿನಿ ಸುದ್ದಿ; ಮೈಸೂರು: ಹುಟ್ಟುಹಬ್ಬದ ದಿನವೇ ಬಿಜೆಪಿ ಮುಖಂಡನನ್ನು ಆತನ ಸ್ನೇಹಿತರೇ ಬಿಯರ್ ಬಾಟಲಿನಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ಮೈಸೂರಿನ ಕುವೆಂಪುನಗರದಲ್ಲಿ ನಡೆದಿದೆ.

ಕೊಲೆಯಾದ ವ್ಯಕ್ತಿಯನ್ನು ಬಿಜೆಪಿಯ ಮೈಸೂರು ನಗರ ಸ್ಲಂ ಮೋರ್ಚಾ ಉಪಾಧ್ಯಕ್ಷ ಆನಂದ್ ಎಂದು ಗುರುತಿಸಲಾಗಿದೆ.

ಕುವೆಂಪು ನಗರದ ಲವಕುಶ ಪಾರ್ಕ್ ಬಳಿಯ ಸರ್ವಿಸ್ ಅಪಾರ್ಟ್‍ಮೆಂಟ್‍ನ ರೂಮ್ ನಲ್ಲಿ ಪಾರ್ಟಿ ಮಾಡುತ್ತಿದ್ದಾಗ ಸ್ನೇಹಿತರಿಂದಲೇ ಆನಂದ್ ಭೀಕರವಾಗಿ ಹತ್ಯೆಯಾಗಿದ್ದಾರೆ.

ಉತ್ತನಹಳ್ಳಿ ಸಮೀಪ ಖಾಸಗಿ ಕಲ್ಯಾಣ ಮಂಟಪದಲ್ಲಿ ಪಾರ್ಟಿ ಮುಗಿಸಿ ಬಂದಿದ್ದ ಆನಂದ್, ನಂತರ ವಾಪಸ್ ಬಂದು ಸರ್ವಿಸ್ ಅಪಾರ್ಟ್‍ಮೆಂಟ್ ನಲ್ಲಿ ರೂಮ್ ಮಾಡಿ ಸ್ನೇಹಿತರ ಜೊತೆ ಪಾರ್ಟಿ ಮಾಡುತ್ತಿದ್ದ. ಪಾರ್ಟಿ ನಡೆಯುವಾಗಲೇ ಸ್ನೇಹಿತರೊಂದಿಗೆ ಮಾತಿನ ಚಕಮಕಿ ನಡೆದಿದ್ದು, ವಿಕೋಪಕ್ಕೆ ತಿರುಗಿ ಬಿಯರ್ ಬಾಟಲಿಯಿಂದ ಸ್ನೇಹಿತರೇ ಆನಂದನಿಗೆ ಚುಚ್ಚಿದ್ದಾರೆ ಗಂಭೀರವಾಗಿ ಗಾಯಗೊಂಡಿದ್ದ ಆನಂದ್ ಸಾವನ್ನಪ್ಪಿದ್ದು, ಸ್ನೇಹಿತರು ಪರಾರಿಯಾಗಿದ್ದಾರೆ.

Home add -Advt

ಹತ್ಯೆಗೀಡಾದ ಆನಂದ್ ಬಿಜೆಪಿ ಮುಖಂಡ ರಾಜೀವ್ ಬೆಂಬಲಿಗನಾಗಿದ್ದು, ರಿಯಲ್ ಎಸ್ಟೇಟ್ ಹಾಗೂ ಫೈನಾನ್ಸ್ ನಡೆಸುತ್ತಿದ್ದ. ಕಳೆದ 13 ವರ್ಷಗಳ ಹಿಂದೆ ಜನತಾನಗರದ ಮಾರುತಿ ಟೆಂಟ್ ರಸ್ತೆಯಲ್ಲಿ ಕುಮಾರಸ್ವಾಮಿ ಎಂಬಾತನನ್ನು ಮರ್ಡರ್ ಮಾಡಿದ್ದ. ನಂತರ ಜೈಲು ಶಿಕ್ಷೆ ಅನುಭವಿಸಿ ವಾಪಸ್ ಆಗಿದ್ದ. ಹಳೇ ವೈಷಮ್ಯದಿಂದಲೇ ಆನಂದ್ ಹತ್ಯೆ ನಡೆದಿದೆ ಎನ್ನಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button