
ಪ್ರಗತಿವಾಹಿನಿ ಸುದ್ದಿ; ಮೈಸೂರು : ಚಾಮುಂಡಿ ಬೆಟ್ಟದ ನಂದಿ ಮಾರ್ಗದ ರಸ್ತೆಯ ಮತ್ತೊಂದು ಭಾಗದಲ್ಲಿ ಮತ್ತೊಮ್ಮೆ ಭೂ ಕುಸಿತ ಉಂಟಾಗಿದೆ.
ಕಳೆದ ಎರಡು ವರ್ಷಗಳಿಂದ ಬೆಟ್ಟದಲ್ಲಿ ನಿರಂತರವಾಗಿ ಭೂಮಿ ಕುಸಿಯುತ್ತಿದೆ. ಇದೀಗ ಮತ್ತೊಮ್ಮೆ ಭೂ ಕುಸಿದಿದ್ದು, ರಸ್ತೆಯು ಬಿರುಕು ಬಿಟ್ಟಿದೆ. ಹೀಗಾಗಿ ಇದೇ ಭಾಗದಲ್ಲಿ ಮತ್ತೆ ಭೂ ಕುಸಿತವಾಗುವ ಸಾಧ್ಯತೆ ಹೆಚ್ಚಿದೆ.
ಇನ್ನು ಕಳೆದ ಮೂರ್ನಾಲ್ಕು ದಿನಗಳಿಂದ ಮೈಸೂರು ಭಾಗದಲ್ಲಿ ನಿರಂತರ ಮಳೆಯಾಗುತ್ತಿದೆ. ಹೀಗಾಗಿ ಜಿಲ್ಲೆಯಲ್ಲಿ ನಾನಾ ಅವಾಂತರಗಳು ಸೃಷ್ಠಿಯಾಗಿದ್ದು, ಹಲವೆಡೆ ಮರಗಳು ಧರೆಗುರುಳಿದ್ದು, ವಿದ್ಯುತ್ ಕಂಬಗಳು ಕೂಡ ಮುರಿದು ಬಿದ್ದಿವೆ. ಇದರಿಂದ ಅಲ್ಲಲ್ಲಿ ವಿದ್ಯುತ್ ವ್ಯತ್ಯಯವಾಗಿದೆ.
ಭಯೋತ್ಪಾದನೆ ದಮನಕ್ಕೆ ಸಾಮಾನ್ಯ ಪೇದೆಯೂ ಎಚ್ಚರಿಕೆಯಿಂದ ಕೆಲಸ ಮಾಡಬೇಕು: ಸಿಎಂ ಬೊಮ್ಮಾಯಿ
https://pragati.taskdun.com/politics/police-sasmarana-dinacharanecm-basaaraj-bommaibangalore/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ