ಪ್ರಗತಿವಾಹಿನಿ ಸುದ್ದಿ; ಮೈಸೂರು: ಚಾಮುಂಡಿ ಬೆಟ್ಟಕ್ಕೆ ಸಮೀಪವಿರುವ ಮೈಸೂರು ತಾಲ್ಲೂಕಿನ ಮಾರಶೆಟ್ಟಿ ಗ್ರಾಮದ ಹೊರವಲಯದಲ್ಲಿ ಚಿರತೆಯೊಂದು ಬೋನಿಗೆ ಬಿದ್ದಿದೆ.
ಗ್ರಾಮದ ಹೊರವಲಯದಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿದ್ದ ಚಿರತೆ ಜಾನುವಾರುಗಳನ್ನು ತಿಂದು ಪರಾರಿಯಾಗುತ್ತಿತ್ತು. ಇದರ ಕಾಟಕ್ಕೆ ಬೇಸತ್ತ ಗ್ರಾಮಸ್ಥರು, ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು. ಶುಕ್ರವಾರ ರಾತ್ರಿ ಗ್ರಾಮಕ್ಕೆ ಆಹಾರ ಅರಸಿ ಬಂದ ಚಿರತೆ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿದೆ. ಚಿರತೆಯನ್ನು ರಕ್ಷಿಸಿ ನಾಗರಹೊಳೆ ಅಭಯಾರಣ್ಯಕ್ಕೆ ಕಳುಹಿಸಲಾಗಿದೆ.
ಮೈಸೂರು ಜಿಲ್ಲೆಯ ನಾನಾ ಭಾಗಗಳಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು ಅರಣ್ಯ ಇಲಾಖೆ ಸಿಬ್ಬಂದಿ ಬೋನು ಇಟ್ಟು ಕಾಯುತ್ತಿದ್ದಾರೆ. ಶುಕ್ರವಾರ ತಿ.ನರಸೀಪುರ ತಾಲ್ಲೂಕಿನ ಬನ್ನೂರು ಹೋಬಳಿ ಬಿ. ಸೀ ಹಳ್ಳಿ ಬಳಿ ಮೂರು ಚಿರತೆ ಮರಿಗಳು ಕಬ್ಬಿನ ಗದ್ದೆಯಲ್ಲಿ ಪತ್ತೆಯಾಗಿದ್ದವು. ಈಗ ಇದರ ತಾಯಿಯನ್ನು ಹಿಡಿಯಲು ಬೋನು ಇರಿಸಲಾಗಿದೆ.
*ಮೂವರು ವಿದ್ಯಾರ್ಥಿಗಳು ನೀರುಪಾಲು*
https://pragati.taskdun.com/3-studentdeathvijayanagara/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ