
ಪ್ರಗತಿವಾಹಿನಿ ಸುದ್ದಿ; ಮೈಸೂರು: ವಿದ್ಯುತ್ ಪ್ರವಹಿಸಿ ಕರ್ತವ್ಯನಿರತ ಚೆಸ್ಕಾಂ ಸಿಬ್ಬಂದಿ ಸಾವನ್ನಪ್ಪಿರುವ ದಾರುಣ ಘಟನೆ ಮೈಸೂರು ನಗರದ ಹೂಟಗಳ್ಳಿ ಬಡಾವಣೆಯಲ್ಲಿ ನಡೆದಿದೆ.
ಸಹಾಯಕ ಲೈನ್ ಮ್ಯಾನ್ ಸಂತೋಷ್ (26) ಮೃತ ದುರ್ದೈವಿ. ಟ್ರಾನ್ಸ್ ಫಾರ್ಮರ್ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ್ದಾರೆ.
ಚೆಸ್ಕಾಂ ಅಧಿಕಾರಿಗಳ ನಿರ್ಲಕ್ಷವೇ ಯುವಕ ಸಂತೋಷ್ ಸಾವಿಗೆ ಕಾರಣ ಎಂದು ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಎಸಿಪಿ ಗಜೇಂದ್ರ ಪ್ರಸಾದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೈಸೂರಿನ ವಿಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ