CrimeKannada NewsKarnataka NewsLatest

*ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಮೋಸ, ಕಾಂಗ್ರೆಸ್ ಮುಖಂಡ, ಪುರಸಭೆ ಮಾಜಿ ಅಧ್ಯಕ್ಷನ ವಿರುದ್ಧ ದೂರು ದಾಖಲು*

ಪ್ರಗತಿವಾಹಿನಿ ಸುದ್ದಿ: ಯುವತಿಯೊಬ್ಬಳನ್ನು ಪ್ರೀತಿಸಿ ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿ ಬೇರೊಂದು ಯುವತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿರುವ ಪುರಸಭೆ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡನ ವಿರುದ್ಧ ಲವ್ -ಸೆಕ್ಸ್-ದೋಖಾ ಕೇಸ್ ದಾಖಲಾಗಿದೆ.

ಮೈಸೂರು ಜಿಲ್ಲೆಯ ಟಿ ನರಸೀಪುರದ ಕಾಂಗ್ರೆಸ್‌ ಮುಖಂಡ, ಪುರಸಭೆ ಮಾಜಿ ಅಧ್ಯಕ್ಷ ಮದನ್‌ ರಾಜ್‌ ವಿರುದ್ಧ ಸಂತ್ರಸ್ತ ಯುವತಿ ಪ್ರೀತಿ ಹೆಸರಲ್ಲಿ ವಂಚಿಸಿದ ಆರೋಪದಡಿ ದೂರು ದಾಖಲಿಸಿದ್ದಾರೆ.

ಈ ಬಗ್ಗೆ ಟಿ ನರಸೀಪುರ ಪೊಲೀಸ್‌ ಠಾಣಿಯಲ್ಲಿ ಯುವತಿ ದೂರು ನೀಡಿದ್ದಾರೆ. ದೂರಿನಲ್ಲಿ, ಮದನ್‌ ರಾಜ್‌ ತನ್ನನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಆತನ ಜೊತೆ ನಾನಿದ್ದ ಫೋಟೋಗಳಿರುವ ಮೊಬೈಲ್‌ಗಳನ್ನು ನನ್ನಿಂದ ಕಿತ್ತುಕೊಂಡಿದ್ದಾನೆ. ಅಲ್ಲದೇ ಮದುವೆಗೆ ಒತ್ತಾಯಿಸಿದಾಗ, ಇಬ್ಬರು ಒಟ್ಟಿ ಇರೋಣ ಎಂದು ಹೇಳಿ ಮನೆಯಲ್ಲಿ ಮದುವೆ ಒಪ್ಪುತ್ತಿಲ್ಲ ಎಂದು ಹೇಳುತ್ತಾ ಇಬ್ಬರು ವಿಷ ಕುಡಿಯೋಣ ಎಂದು ನನಗೆ ಮಾತ್ರ ವಿಷ ಕೊಟ್ಟು ಕೊಲೆಗೆ ಯತ್ನಿಸಿದ್ದಾನೆ. ತಾನೂ ವಿಷಕುಡಿದಂತೆ ನಾಟಕವಾಡಿ ಎಸ್ಕೇಪ್ ಆಗಿದ್ದಾನೆ.

ಈಗ ಮತ್ತೊಬ್ಬ ಯುವತಿ ಜೊತೆ ಎಂಗೇಜ್‌ಮೆಂಟ್‌ ಮಾಡಿಕೊಂಡಿದ್ದಾನೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ. ಸದ್ಯ ಯುವತಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ. ಕೇಸ್ ದಾಖಲಾಗುತ್ತಿದ್ದಂತೆ ಮದನ್ ನಾಪತ್ತೆಯಾಗಿದ್ದಾನೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button